October 12, 2026
Monday, October 12, 2026
spot_img

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 5.87 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ಜಪ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 5.87 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದೆ.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕರು ಗಾಂಜಾ ಸಾಗಿಸುತ್ತಿರುವ ಮಾಹಿತಿ ಆಧರಿಸಿ ವಿಚಾರಣೆ ನಡೆಸಲಾಗಿದೆ. ಈ ವೇಳೆ ಒಟ್ಟು 5.87 ಕೋಟಿ ರೂ. ಮೌಲ್ಯದ 16 ಕೆಜಿ 880 ಗ್ರಾಂ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಪ್ಯಾಸೆಂಜರ್ಸ್‌ ಗಾಂಜಾ ಹೊತ್ತು ತಂದಿರುವುದು ಗೊತ್ತಾಗಿದೆ. ಹೈಡ್ರೋಫೋನಿಕ್‌ ಗಾಂಜಾ ಇದಾಗಿದ್ದು, ಪ್ರಯಾಣಿಕರ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದೆ.

Must Read