ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, June 25, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣ: ಆರೋಪಿ ವಿಕ್ರಂ ಭಾವೆಗೆ ಜಾಮೀನು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣದ ಆರೋಪಿ ವಿಕ್ರಂ ಭಾವೆಗೆ ಬಾಂಬೆ ಹೈಕೋರ್ಟ್‌ ಗುರುವಾರ ಜಾಮೀನು ನೀಡಿದೆ.
ನ್ಯಾಯಮೂರ್ತಿಗಳಾದ ಎಸ್‌.ಎಸ್‌ ಶಿಂಧೆ ಮತ್ತು ಮನೀಶ್‌ ಪಿತಾಳೆ ಅವರನ್ನು ಒಳಗೊಂಡ ವಿಭಾಗೀಯ ಪೀಠವು 1 ಲಕ್ಷದ ನಗದು ಶ್ಯೂರಿಟಿ ಬರೆಸಿಕೊಂಡು ಭಾವೆಗೆ ಜಾಮೀನು ಅನುಮತಿ ನೀಡಿದ್ದಾರೆ.
ಭಾವೆ ಸದ್ಯ ಯೆರವಡಾ ಸೆಂಟ್ರಲ್ ಜೈಲಿನಲ್ಲಿದ್ದು , ಶ್ಯೂರಿಟಿ ನೀಡಿದ ನಂತರವೇ ಬಿಡುಗಡೆ ಮಾಡಲಾಗುವುದು.
2013ರ ಆಗಸ್ಟ್‌ 20ರಂದು ಪುಣೆಯಲ್ಲಿ ನರೇಂದ್ರ ದಾಭೋಲ್ಕರ್‌ ಹತ್ಯೆಯಾಗಿತ್ತು. ಇತರ ಇಬ್ಬರು ಆರೋಪಿಗಳಾದ ಸಚಿನ್ ಅಧೂರೆ, ಶರದ್‌ ಕಲಸ್ಕರ್‌ರಿಗೆ ನೆರವಾಗಿದ್ದ ಆರೋಪದ ಅಡಿಯಲ್ಲಿ ಭಾವೆಯನ್ನು ಪೊಲೀಸರು ಬಂಧಿಸಿದ್ದರು.
ಜಾಮೀನು ಪಡೆದ ನಂತರ ಭಾವೆ ಮೊದಲ ತಿಂಗಳಿನಲ್ಲಿ ಪ್ರತಿ ದಿನ ಮತ್ತು ಎರಡನೇ ತಿಂಗಳಿನಲ್ಲಿ ಪ್ರತಿ ಎರಡು ದಿನಗಳಿಗೊಮ್ಮೆ ಪುಣೆಯ ಸಂಬಂಧಪಟ್ಟ ಪೊಲೀಸ್‌ ಠಾಣೆಯಲ್ಲಿ ಹಾಜರಾಗುವಂತೆ ನ್ಯಾಯಪೀಠ ಸೂಚಿಸಿದೆ. ಅದೇ ವೇಳೆ ದಾಭೋಲ್ಕರ್‌ ಹತ್ಯೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಮತ್ತು ಯಾವುದೇ ಪುರಾವೆಗಳು ನಾಶ ಮಾಡದಂತೆ ನಿರ್ದೇಶನ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss