ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸ ದಿಗಂತ ವರದಿ, ಕಲಬುರಗಿ:
ದೇಶದ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಕೆಲಸ ಮಾಡುತ್ತಾ, ಅವರ ಸರಕಾರಕ್ಕೆ ಕಪ್ಪು ಚುಕ್ಕೆ ಬರದಂತೆ ನಾವು, ನೀವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕೆಂದು ಕೇಂದ್ರದ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕಿವಿ ಮಾತು ಹೇಳಿದರು.
ಅವರು ಶನಿವಾರ ನಗರದ ಬಿಜೆಪಿ ಕಚೇರಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆಯಲ್ಲಿ ಮಾತನಾಡಿ, ಕೃಷಿ ವಲಯಕ್ಕೆ ಕೇಂದ್ರ ಹೆಚ್ಚಿನ ಮಹತ್ವ ನೀಡಿದ್ದು, ಕೇಂದ್ರದ ಅನುದಾನವನ್ನು ಸರಿಯಾಗಿ ಬಳಸಿಕೊಂಡು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದರು.
ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಿ, ರೈತರು ಸುಖದಿಂದ,ನೆಮ್ಮದಿಯ ಜೀವನ ನಡೆಸಲು ಕೇಂದ್ರ ಹಾಗೂ ರಾಜ್ಯ ಸರಕಾರ ಬದ್ದ ಎಂದರು.
ನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ
ನಮ್ಮ ಶಕ್ತಿಯ ಆಧಾರದ ಮೇಲೆ ನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿದು, ಮುಂಬರುವ ಜಿ.ಪಂ., ತಾ.ಪಂ. ಚುನಾವಣೆಯಲ್ಲಿ ನಮ್ಮ ಕಾಯ೯ಕತ೯ರಿಗೆ ಹೆಚ್ಚಿನ ಮಹತ್ವ ಕೊಡುವುದಾಗಿ ಅವರು ಬರವಸೆ ನೀಡಿದರು.
ಸಭೆಯಲ್ಲಿ ಶಾಸಕರಾದ ದತ್ತಾತ್ರೇಯ ಪಾಟೀಲ್, ಬಸವರಾಜ ಮತ್ತಿಮಡು, ಶಶೀಲ ನಮೋಶಿ, ರಾಜಕುಮಾರ್ ಪಾಟೀಲ್, ನಗರ ಅಧ್ಯಕ್ಷ ಸಿದ್ದಾಜೀ ಪಾಟೀಲ್, ಶಿವರಾಜ್ ಪಾಟೀಲ್, ಶರಣಪ್ಪ ತಳವಾರ, ಶಶಿಕಲಾ ಟೆಂಗಳಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.