Sunday, August 14, 2022

Latest Posts

ಸೇವೆ-ಕ್ರೀಡೆಗಳ ಅದ್ಭುತ ಸಂಗಮ: ಬೆಳ್ಳಿ ಗೆದ್ದ ಕನ್ನಡಿಗ, ಐಎಎಸ್​ ಅಧಿಕಾರಿ ಸುಹಾಸ್​ ಯತಿರಾಜ್’ಗೆ​ ಮೋದಿ ಅಭಿನಂದನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ  ಬ್ಯಾಡ್ಮಿಂಟನ್​ ವಿಭಾಗದಲ್ಲಿ ಕನ್ನಡಿಗ ಸುಹಾಸ್​ ಯತಿರಾಜ್​ ಭಾನುವಾರ ಬೆಳ್ಳಿ ಪದಕವನ್ನು ಜಯಿಸಿದ್ದು, ಇವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,’ ಸೇವೆ ಮತ್ತು ಕ್ರೀಡೆಗಳ ಅದ್ಭುತ ಸಂಗಮ! ಸುಹಾಸ್ ಯತಿರಾಜ್ ಅವರು  ತಮ್ಮ ಅಸಾಧಾರಣ ಕ್ರೀಡಾ ಪ್ರದರ್ಶನದ ಮೂಲಕ ನಮ್ಮ ಇಡೀ ರಾಷ್ಟ್ರ ಹೆಮ್ಮೆ ಪಡುವಂತೆ ಮಾಡಿದ್ದಾರೆ.  ಬೆಳ್ಳಿ ಪದಕ ಗೆದ್ದ ಅವರಿಗೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು” ಎಂದಿದ್ದಾರೆ.

38 ವರ್ಷದ ಸುಹಾಸ್​ ಯತಿರಾಜ್​ ಮೂಲ ಕರ್ನಾಟಕ. ಐಎಎಸ್​ ಅಧಿಕಾರಿಯಾಗಿದ್ದು, ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಪದಕ ಜಯಿಸಿದ ಮೊದಲ ಐಎಎಸ್​ ಅಧಿಕಾರಿ ಎಂಬ ಇತಿಹಾಸವನ್ನು ನಿರ್ಮಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss