ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಪೋರ್ಷೆ ಅಪಘಾತ ಪ್ರಕರಣದಲ್ಲಿ ಇತ್ತೀಚೆಗೆ ಬಾಲಾಪರಾಧಿ ನ್ಯಾಯ ಮಂಡಳಿ ನೀಡಿರುವ ತೀರ್ಪಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
ನರೇಂದ್ರ ಮೋದಿ ಅವರು ಎರಡು ಭಾರತಗಳನ್ನು ನಿರ್ಮಿಸುತ್ತಿದ್ದಾರೆ. ರಾಹುಲ್ ಗಾಂಧಿ ಅವರು X ನಲ್ಲಿ “ನ್ಯಾಯವೂ ಸಂಪತ್ತಿನ ಮೇಲೆ ಅವಲಂಬಿತವಾಗಿದೆ’” ಎಂಬ ವಿಡಿಯೋ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.
“ರಸ್ತೆ ಅಪಘಾತದಲ್ಲಿ ಬಸ್, ಟ್ರಕ್ ಅಥವಾ ಓಲಾ ಉಬರ್ ಚಾಲಕ ಆಕಸ್ಮಿಕವಾಗಿ ಯಾರನ್ನಾದರೂ ಕೊಂದರೆ, ಅವರನ್ನು 10 ವರ್ಷಗಳವರೆಗೆ ಜೈಲಿಗೆ ಕಳುಹಿಸಲಾಗುತ್ತದೆ ಮತ್ತು ಕಾರಿನ ಕೀಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ. ಆದರೆ, 16 ವರ್ಷದ ಯುವಕನೊಬ್ಬ ಕುಡಿದ ಅಮಲಿನಲ್ಲಿ ಪೋರ್ಷೆ ಕಾರು ಚಲಾಯಿಸಿ ಇಬ್ಬರನ್ನು ಕೊಂದಿದ್ದಾನೆ. ಆದರೆ, ಅವರಿಗೆ ಸರಿಯಾದ ಶಿಕ್ಷೆಯಾಗಲಿಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
नरेंद्र मोदी दो हिंदुस्तान बना रहे हैं – जहां न्याय भी दौलत का मोहताज है। pic.twitter.com/uuJHvDdeRD
— Rahul Gandhi (@RahulGandhi) May 21, 2024