ಇಂದು ಬೆಳಗ್ಗೆ 11ಕ್ಕೆ ಪ್ರಧಾನಿ ಮೋದಿಯವರ ʼಮನ್‌ ಕಿ ಬಾತ್‌ʼ ಕಾರ್ಯಕ್ರಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 11 ಗಂಟೆಗೆ ರೇಡಿಯೋ ಕಾರ್ಯಕ್ರಮ “ಮನ್ ಕಿ ಬಾತ್” ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ ಮತ್ತು ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಿದ ನಂತರ ಪ್ರಧಾನಿ ಮೋದಿ ಅವರು ಮೊದಲ ಬಾರಿಗೆ ಈ ರೇಡಿಯೋ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿರುವುದರಿಂದ ಇಂದಿನ ಕಾರ್ಯಕ್ರಮವು ಮಹತ್ವ ಪಡೆದಿದೆ.
ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಜೆಪಿ ಕಾರ್ಯಕರ್ತರೊಡಗೂಡಿ ಮನ್‌ ಕಿ ಬಾತ್ ಕಾರ್ಯಕ್ರಮವನ್ನು ಆಲಿಸಲಿದ್ದಾರೆ.
ಮನ್ ಕಿ ಬಾತ್” ಪ್ರಧಾನ ಮಂತ್ರಿಯವರ ಮಾಸಿಕ ರೇಡಿಯೋ ಭಾಷಣವಾಗಿದೆ, ಇದನ್ನು ಪ್ರತಿ ತಿಂಗಳ ಕೊನೆಯ ಭಾನುವಾರದಂದು ಬೆಳಿಗ್ಗೆ 11 ಗಂಟೆಗೆ ಪ್ರಸಾರ ಮಾಡಲಾಗುತ್ತದೆ. ಕಾರ್ಯಕ್ರಮವನ್ನು ರೆಡಿಯೋ ಮತ್ತು ಎಐಆರ್ ನ್ಯೂಸ್ ಹಾಗೂ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ. ಮನ್ ಕಿ ಬಾತ್ ನ ಮೊದಲ ಕಂತು ಅಕ್ಟೋಬರ್ 3, 2014 ರಂದು ಪ್ರಸಾರವಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!