ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನ ಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ಭವನಕ್ಕೆ ತೆರಳಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ ಪ್ರಧಾನಿ ಮೋದಿ ಅವರು 17ನೇ ಲೋಕಸಭೆಯನ್ನು ವಿಸರ್ಜಿಸುವಂತೆ ಮನವಿ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸಚಿವರ ರಾಜೀನಾಮೆ ಪತ್ರವನ್ನು ಸ್ವೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕಾರ ಮಾಡಿದರು.