ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಗೆದ್ದು ಬೀಗಿದ್ದ ಕ್ರಿಕೆಟ್ ಶಿಶು ನೆದರ್ಲೆಂಡ್ಸ್ ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲಾಗಿದೆ. ಆಸೀಸ್ ಬೌಲರ್ಗಳ ದಾಳಿಗೆ ಕೇವಲ 90 ರನ್ಗಳಿಗೆ ಆಲೌಟ್ ಆಗಿ ಕ್ರಿಕೆಟ್ ಇತಿಹಾಸದಲ್ಲಿ ಕೆಟ್ಟ ದಾಖಲೆ ಬರೆದಿದೆ.
ಈ ಮೂಲಕ 309 ರನ್ಗಳ ಜಯದೊಂದಿಗೆ ಆಸ್ಟ್ರೇಲಿಯಾ ಒಂದೇ ಪಂದ್ಯದಲ್ಲಿ ಎರಡು ಐತಿಹಾಸಿಕ ದಾಖಲೆ ಬರೆಯಿತು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಆಸ್ಟ್ರೇಲಿಯಾ, ನೆದರ್ಲೆಂಡ್ಸ್ಗೆ 400 ರನ್ಗಳ ಬೃಹತ್ ಮೊತ್ತದ ಗುರಿ ನೀಡಿತ್ತು. ಡೇವಿಡ್ ವಾರ್ನರ್, ಮ್ಯಾಕ್ಸ್ವೆಲ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಸವಾಲಿನ ಆಸ್ಟ್ರೇಲಿಯಾ ಸವಾಲಿನ ಮೊತ್ತ ಪೇರಿಸಿತ್ತು. ಗುರಿ ಬೆನ್ನತ್ತಿದ ನೆದರ್ಲೆಂಡ್ಸ್ ತಂಡ 21 ಓವರ್ಗಳಲ್ಲೇ ತನ್ನೆಲ್ಲ ವಿಕೆಟ್ ಕಳೆದುಕೊಂಡು ಕೇವಲ 90 ರನ್ ಗಳಿಸಿ ಹೀನಾಯ ಸೋಲು ಕಂಡಿತು.
ಬೌಲಿಂಗ್ನಲ್ಲಿ ಫಾರ್ಮ್ನಲ್ಲಿರುವ ಆಡಮ್ ಝಂಪಾ ಉತ್ತಮ ಪ್ರದರ್ಶನ ನೀಡಿದರು. ಆಸೀಸ್ ಪರವಾಗಿ 4 ವಿಕೆಟ್ ಪಡೆದು ಮಿಂಚಿದರು. ಮಿಚೆಲ್ ಮಾರ್ಷ್ 2 ಹಾಗೂ ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್ವುಡ್, ಮಿಚೆಲ್ ಸ್ಟಾರ್ಕ್ ತಲಾ ಒಂದೊಂದು ವಿಕೆಟ್ ಪಡೆದರು.