Wednesday, October 5, 2022

Latest Posts

ರಾಷ್ಟ್ರಮಟ್ಟದ ಕಾಮರ್ಸ್ ಫೆಸ್ಟ್: ವಿವೇಕಾನಂದ ಪದವಿ ಪೂರ್ವ ಕಾಲೇಜ್ ತಂಡಕ್ಕೆ ಸಮಗ್ರ ಪ್ರಶಸ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸುಳ್ಯದ ನೆಹರೂ ಮೆಮೊರಿಯಲ್ ಕಾಲೇಜಿನಲ್ಲಿ ನಡೆದ ಕಾಮ್-ಇನ್‌ಸ್ಟಾನಿಯಾ 2022 ರಾಷ್ಟ್ರಮಟ್ಟದ ಅಂತರ್ ಕಾಲೇಜು ಕಾಮರ್ಸ್ ಫೆಸ್ಟ್ ನಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಸಮಗ್ರ ಪ್ರಶಸ್ತಿಯನ್ನು ಪಡೆದಿದೆ. ಹ್ಯೂಮನ್ ರಿಸೋರ್ಸ್ ವಿಭಾಗದ ಸ್ಫರ್ಧೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ನಿಶ್ಚಿತಾ ಹಾಗೂ ಶ್ರೀಪ್ರದಾ ರಾವ್ ಒಳಗೊಂಡ ತಂಡ ಪ್ರಥಮ ಸ್ಥಾನ ಪಡೆದಿದೆ. ಬ್ಯುಸಿನೆಸ್ ಕ್ವಿಝ್ ನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವೈಭವ್ ಪ್ರಭು ಹಾಗೂ ನಿಹಾರ್ ರೈ ತಂಡ ದ್ವಿತೀಯ ಸ್ಥಾನ ಪಡೆದಿದೆ.

ಫೈನಾನ್ಸ್ ವಿಭಾಗದ ಸ್ಫರ್ಧೆಯಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಸುದೇಶ್ ಹಾಗೂ ಪ್ರದೀಪ್ ತಂಡ ಪ್ರಥಮ ಸ್ಥಾನ ಪಡೆದಿದ್ದು ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಪ್ರತೀಕ್ಷಾ ಹಾಗೂ ಶ್ರೀರಕ್ಷಾ ತಂಡವು ದ್ವಿತೀಯ ಸ್ಥಾನ ಪಡೆದಿದೆ. ಈ ಮೂಲಕ ಕಾಲೇಜಿನ ತಂಡವು ಫೆಸ್ಟ್ ನಲ್ಲಿ ಅಗ್ರಸ್ಥಾನಿಯಾಗಿ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!