Sunday, October 12, 2025

ಭಾರತೀಯ ಜನತಾ ಪಕ್ಷದಿಂದ BLA-1 ಕಾರ್ಯಗಾರಕ್ಕೆರಾಷ್ಟ್ರೀಯ ಶಿಸ್ತು ಸಮಿತಿ ಅಧ್ಯಕ್ಷ ಓಂ ಪಾಠಕ್ ಚಾಲನೆ


ಹೊಸದಿಗಂತ ಡಿಜಿಟಲ್ ಡೆಸ್ಕ್:


ಭಾರತೀಯ ಜನತಾ ಪಕ್ಷ ಹಮ್ಮಿಕೊಂಡಿದ್ದ, ಬೂತ್ ಮಟ್ಟದ ಏಜೆಂಟ್- BLA-1- ಕಾರ್ಯಾಗಾರವನ್ನು ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ ಅಧ್ಯಕ್ಷ ಓಂ ಪಾಠಕ್, ಬೆಂಗಳೂರಿನಲ್ಲಿ ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಭಾರತಾಂಬೆ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಈ ವೇಳೆ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ರಿತು ರಾಜ್ ಸಿನ್ಹಾ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯಸಚೇತಕ ಎನ್. ರವಿಕುಮಾರ್‍ ಸೇರಿದಂತೆ ಹಲವು ಶಾಸಕರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.


ಬಳಿಕ ವಿಜಯೇಂದ್ರ, ಚುನಾವಣಾ ಆಯೋಗ ರಾಜ್ಯದಲ್ಲಿ ಮತದಾರರ ವಿಶೇಷ ಪರಿಷ್ಕರಣಾ ಕಾರ್ಯ ಹಮ್ಮಿಕೊಂಡಿದೆ. ಈಗಾಗಲೆ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಚರ್ಚೆ ನಡೆಸಿದೆ. ಬಿಹಾರದಲ್ಲಿ ಮತದಾರರ ಪರಿಷ್ಕರಣಾ ಕಾರ್ಯ ಮುಗಿಸಿದ್ದು, ರಾಜ್ಯದಲ್ಲಿ ಪರಿಷ್ಕರಣಾ ಕಾರ್ಯ ಕೈಗೆತ್ತಿಕೊಂಡಿದ್ದು ಮಹತ್ವ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ BLA ಕಾರ್ಯಾಗಾರ ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದರು.

error: Content is protected !!