Monday, October 3, 2022

Latest Posts

ಆರ್‌ಎಸ್‌ಎಸ್ ಸಾಮಾಜಿಕ ಜಾಲತಾಣದ ಪ್ರೊಫೈಲ್ ಚಿತ್ರಗಳಲ್ಲಿ ರಾರಾಜಿಸುತ್ತಿದೆ ರಾಷ್ಟ್ರಧ್ವಜ!

ಹೊಸದಿಗಂತ ಡಿಜಿಟಲ್ ಡೆಸ್ಕ್:

75ನೇ ಸ್ವಾತಂತ್ರ್ಯೋತ್ಸವಕ್ಕೆ ದೇಶ ಸಜ್ಜಾಗುತ್ತಿರುವಂತೆಯೇ, ರಾಷ್ಟ್ರೀಯ ಸ್ವಯಂಸೇವಕ ಸಂಘ ತನ್ನ ಸಾಮಾಜಿಕ ಜಾಲತಾಣದ ಪ್ರೊಫೈಲ್ ಚಿತ್ರಗಳಲ್ಲಿ ರಾಷ್ಟ್ರಧ್ವಜವನ್ನು ಬಿಂಬಿಸುವ ಮೂಲಕ, ಇಡೀ ದೇಶ ಸ್ವಾತಂತ್ರ್ಯದ ಅಮೃತೋತ್ಸವದಲ್ಲಿ ಸಂಭ್ರಮದಿಂದ ಪಾಲ್ಗೊಂಡು ರಾಷ್ಟ್ರದ ಪುನರ್ನಿರ್ಮಾಣ ಕಾರ್ಯಕ್ಕೆ ಪಣ ತೊಡಬೇಕೆಂಬ ಸಂದೇಶ ನೀಡಿದೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂದರ್ಭ ಎಲ್ಲರೂ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ ಚಿತ್ರಗಳಲ್ಲಿ ಆ.2ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ಹೊಂದುವಂತೆ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದರು. ಸಂಘದ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಸಾಮಾನ್ಯವಾಗಿ ಭಗವಾಧ್ವಜ ಇರುತ್ತಿದ್ದು, ಇದೀಗ ರಾಷ್ಟ್ರೀಯ ಸ್ಫೂರ್ತಿಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಸಂಘ ಕೂಡಾ ಈ ಕರೆಗೆ ಸ್ಪಂದಿಸಿದೆ. ರಾಷ್ಟ್ರ ಪ್ರೇಮವನ್ನೇ ಉಸಿರಾಗಿಸಿರುವ ಆರ್‌ಎಸ್‌ಎಸ್‌ ವಿರುದ್ಧ ತಿರಂಗಾ ವಿಷಯದಲ್ಲಿ ಕಾಂಗ್ರೆಸ್ ಟೀಕಿಸಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!