ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ : ಇಂದು ಹುಟ್ಟಿದ ಹೆಣ್ಣು ಮಗುವಿಗೆ ರಾಜ್ಯ ಸರ್ಕಾರದಿಂದ ಗಿಫ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಇಂದು ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವೆಂದು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಇಂದು ಹುಟ್ಟುವ ಹೆಣ್ಣು ಮಗುವಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಲಿದೆ.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಎಲ್ಲಾ ಜಿಲ್ಲಾಸ್ಪತ್ರೆಗಳಿಗೆ ಗುಲಾಬಿ ಬಣ್ಣದ ದೀಪಾಲಂಕಾರ ಮಾಡಲು ಮತ್ತು ಇಂದು ಶುಕ್ರವಾರ ಜನಿಸುವ ಹೆಣ್ಣು ಮಕ್ಕಳಿಗೆ ತಲಾ 1,000 ರೂ, ಮೌಲ್ಯದ ಕಿಟ್ ಉಡುಗೊರೆ ಗಿಫ್ಟ್ ನೀಡಲು ಸರ್ಕಾರ ನಿರ್ಧರಿಸಿದೆ.

ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಗೆ ಶುಭಕೋರಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹೆಣ್ಣುಮಕ್ಕಳ ರಕ್ಷಣೆಗೆ ಸರ್ಕಾರ ಬದ್ಧ ಎಂದಿದ್ದಾರೆ. ಹೆಣ್ಣು ಮಕ್ಕಳ ಆರೋಗ್ಯ ಕಾಪಾಡುವ ವಿಚಾರದಲ್ಲಿ ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳನ್ನ ಹಾಕಿಕೊಂಡಿದೆ.

ಅನಿಮೀಯಾ ಮುಕ್ತ ಪೌಷ್ಠಿಕ ಕರ್ನಾಟಕ ಯೋಜನೆ ಹೆಣ್ಣುಮಕ್ಕಳ ರಕ್ತ ಹೀನತೆ ಹೋಗಲಾಡಿಸುವಲ್ಲಿ ಮಹತ್ವದ ಯೋಜನೆಯಾಗಿದೆ. ಶುಚಿ ಯೋಜನೆ, ಜನನಿ ಸುರಕ್ಷಾ ಯೋಜನೆಗಳನ್ನ ಜಾರಿಗೊಳಿಸದೆ. ವಿಶೇಷವಾಗಿ ಹೆಣ್ಣುಭ್ರೂಣ ಹತ್ಯೆಗಳನ್ನ ನಡೆಸುವವರ ವಿರುದ್ಧ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಹೆಣ್ಣು ಹುಟ್ಟುವ ಮೊದಲೇ ಎದುರಿಸುವ ಲಿಂಗ ತಾರತಮ್ಯವು ಒಂದು ಪ್ರಚಲಿತ ಸಮಸ್ಯೆಯಾಗಿದೆ. ಇಂದಿಗೂ ಸಹ ಹೆಚ್ಚಿನ ಜನರು ಹೆಣ್ಣು ಮಕ್ಕಳಿಗಿಂತ ಗಂಡು ಮಕ್ಕಳನ್ನು ಹೊಂದಬೇಕೆಂದು ಎಂದು ನಂಬುತ್ತಾರೆ. ಇದು ಸರಿಯಲ್ಲ. ಹೆಣ್ಣನ್ನ ಪೂಜ್ಯ ಭಾವನೆಯಿಂದ ನೋಡಬೇಕು.

ಲಿಂಗ ಪತ್ತೆ ಮತ್ತು ಗರ್ಭಪಾತ ನಡೆಸುವ ಎಲ್ಲಾ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಮತ್ತು ಹೆಣ್ಣು ಮಗುವಿನ ಮೌಲ್ಯದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಪಿಸಿಪಿಎನ್‌ಡಿಟಿ ಕಾಯ್ದೆಯನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಸಮಾಜದಲ್ಲಿ ಹೆಣ್ಣು ಮಗು ಎದುರಿಸುತ್ತಿರುವ ಎಲ್ಲಾ ಅಸಮಾನತೆಗಳ ಬಗ್ಗೆ ದಿನಾಚರಣೆಯ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here