ನ್ಯಾಷನಲ್ ಹೆರಾಲ್ಡ್​ ಪ್ರಕರಣ: ಇ.ಡಿ ವಿಚಾರಣೆ ಎದುರಿಸಿ ಹೊರ ಬಂದ ಸೋನಿಯಾ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್

ನ್ಯಾಷನಲ್​ ಹೆರಾಲ್ಡ್​​ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಸೋನಿಯಾ ಗಾಂಧಿ ಇಂದು ಸತತ ಮೂರು ಗಂಟೆಗಳ ಕಾಲ ವಿಚಾರಣೆಗೊಳಲ್ಪಟ್ಟಿದ್ದು, ಕೆಲ ಹೊತ್ತಿನ ಮುಂಚೆ ಅವರು ನಿವಾಸಕ್ಕೆ ತೆರಳಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಇ.ಡಿ ಕಚೇರಿಯಿಂದ ಸೋನಿಯಾ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಹೀಗಾಗಿ, ಇಂದು ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಅಧಿಕಾರಿಗಳು ಬರೋಬ್ಬರಿ ಮೂರು ಗಂಟೆಗಳ ಕಾಲ ಮಾಹಿತಿ ಪಡೆದುಕೊಂಡಿದ್ದಾರೆ.
ನ್ಯಾಷನಲ್ ಹೆರಾಲ್ಡ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪುತ್ರ ರಾಹುಲ್ ಗಾಂಧಿ ಸಹ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ಎದುರಿಸಿದ್ದಾರೆ. ಕೋವಿಡ್​ ಕಾರಣದಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಸೋನಿಯಾ ಗಾಂಧಿ ಇದೀಗ ಚೇತರಿಸಿಕೊಂಡಿದ್ದು, ಇದೀಗ ವಿಚಾರಣೆ ಎದುರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!