Friday, August 12, 2022

Latest Posts

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿಗೆ ಮತ್ತೆ ನೋಟಿಸ್ ಜಾರಿಮಾಡಿದ ED

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೊಮ್ಮೆ ನೋಟಿಸ್ ಜಾರಿ ಮಾಡಿದೆ.
ಜುಲೈ 21ರಂದು ವಿಚಾರಣೆಗೆ ಬರುವಂತೆ ತಿಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿ ನಿರ್ದೇಶನಾಲಯ ಸೋನಿಯಾ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಆದರೆ,ಕೋವಿಡ್ ಹಾಗೂ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಕಾರಣ ಹೆಚ್ಚಿನ ಸಮಯವಕಾಶ ಕೋರಿದ್ದರು.
ಈ ಹಿಂದೆ ಜೂನ್ 8 ರಂದು ವಿಚಾರಣೆಗಾಗಿ ಇಡಿ ಮುಂದೆ ಹಾಜರಾಗುವಂತೆ ಸೋನಿಯಾ ಅವರಿಗೆ ನೋಟಿಸ್ ನೀಡಿತು. ಅವರಿಗೆ ಕೋವಿಡ್ ಕಾಣಿಸಿಕೊಂಡಿದ್ದ ಕಾರಣ ಜೂನ್ 23 ರಂದು ಹಾಜರಾಗುವಂತೆ ಹೊಸ ಸಮನ್ಸ್ ನೀಡಿತ್ತು. ಆದರೆ, ಉಸಿರಾಟದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ, ಹೆಚ್ಚಿನ ಸಮಯವಕಾಶ ಕೇಳಿದ್ದರು.
ಇದೀಗ ಮತ್ತೊಮ್ಮೆ ನೋಟಿಸ್ ಜಾರಿ ಮಾಡಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಜೂನ್ 13 ರಿಂದ ಜೂನ್ 21ರ ನಡುವೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಐದು ಬಾರಿ ಪ್ರಶ್ನಿಸಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss