Sunday, December 3, 2023

Latest Posts

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಇಡಿಯಿಂದ ಗಾಂಧಿ ಕುಟುಂಬಕ್ಕೆ ಸೇರಿದ 752 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಗಾಂಧಿ ಕುಟುಂಬಕ್ಕೆ ಸೇರಿದ 751.9 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿದೆ.

ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಗಾಂಧಿ ಕುಟುಂಬಕ್ಕೆ ಸೇರಿದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ದೆಹಲಿ, ಮುಂಬೈ , ಲಖನೌ ಸೇರಿದಂತೆ ಕೆಲ ನಗರದಲ್ಲಿರುವ ಸ್ಥಿರ ಆಸ್ತಿ ರೂಪದ ಆದಾಯ 661.69 ಕೋಟಿ ರೂಪಾಯಿ ಹಾಗೂ ಯಂಗ್ ಇಂಡಿಯಾ ಸಂಸ್ಥೆಯ ಈಕ್ವಿಟಿ ಷೇರುಗಳಲ್ಲಿ ಹೂಡಿಕೆ ಮಾಡಿರುವ 90.21 ಕೋಟಿ ರೂಪಾಯಿಯನ್ನು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಹಾಗೂ ಯಂಗ್ ಇಂಡಿಯನ್(YI) ಸಂಸ್ಥೆಯ ಒಟ್ಟು 752 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ಥಿ ಹಾಗೂ ಹೂಡಿಕೆ ರೂಪದ ಅಕ್ರಮ ಆದಾಯದವನ್ನು ಮನಿ ಲಾಂಡರಿಂಗ್ ಪ್ರಕರಣದಲ್ಲಿ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲು ಇಡಿ ಆದೇಶ ಹೊರಡಿಸಿದೆ. ದೆಹಲಿ, ಮುಂಬೈ, ಲಖನೌ ಸೇರಿದಂತೆ ಇತರ ನಗರಗಳಲ್ಲಿನ ಆಸ್ಥಿಯನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ಇಡಿ ಮಾಹಿತಿ ನೀಡಿದೆ.

ಕಾಂಗ್ರೆಸ್ಸಿನ ಮುಖವಾಣಿಯಾಗಿರುವ ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯ ಅಕ್ರಮ ಹಣ ವರ್ಗಾವಣೆ ಕುರಿತು ಇಡಿ ತನಿಖೆ ನಡೆಸುತ್ತಿದೆ. ಅದರ ಮಾಲೀಕತ್ವವನ್ನು ಸದ್ಯ ಯಂಗ್‌ ಇಂಡಿಯನ್‌ ಸಂಸ್ಥೆ ಹೊಂದಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ ಬರೋಬ್ಬರಿ 2,000 ಕೋಟಿ ರೂಪಾಯಿ ಹಗರಣವಾಗಿದೆ. ದೆಹಲಿಯ ಐಟಿಒ ಬಳಿ ಬಹಾದ್ದೂರ್‌ ಶಾ ಜಾಫರ್‌ ಮಾರ್ಗದಲ್ಲಿರುವ ‘ಹೆರಾಲ್ಡ್‌ ಹೌಸ್‌’ ಈ ಪತ್ರಿಕೆಯ ಕೇಂದ್ರ ಕಚೇರಿ. ತೀವ್ರ ನಷ್ಟದಲ್ಲಿದ್ದ ಅಸೋಸಿಯೇಟೆಡ್‌ ಜರ್ನಲ್‌ (ಎಜೆಎಲ್‌)ಗೆ 2001-02 ಹಾಗೂ 2010-11ರ ನಡುವೆ ಕಾಂಗ್ರೆಸ್‌ 90 ಕೋಟಿ ರು. ಸಾಲ ನೀಡಿತ್ತು. ಇದಕ್ಕೆ ಪ್ರತಿಯಾಗಿ ಸೋನಿಯಾ, ರಾಹುಲ್‌ ಮುನ್ನಡೆಸುತ್ತಿದ್ದ ಯಂಗ್‌ ಇಂಡಿಯನ್‌ ಕಂಪನಿಗೆ ಎಜೆಎಲ್‌ ಷೇರುಗಳನ್ನು ಹಂಚಿಕೆ ಮಾಡಲಾಗಿತ್ತು. ನೂರಾರು ಕೋಟಿ ರು. ಬೆಲೆ ಬಾಳುವ ಆಸ್ತಿಯನ್ನು ಕೇವಲ 90 ಕೋಟಿ ರು. ಸಾಲ ಕೊಟ್ಟಂತೆ ಮಾಡಿ ಖರೀದಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!