ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಸೋನಿಯಾ ವಿಚಾರಣೆ ನಂತರ 10ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ ಇಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾಗಾಂಧಿ ವಿಚಾರಣೆಯ ನಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತಕ್ಕೂ ಹೆಚ್ಚು ಪ್ರದೇಶಗಳ ಮೇಲೆ ಇಡಿದಾಳಿ ಮಾಡಿದೆ.

ನವದೆಹಲಿಯಲ್ಲಿರುವ ನ್ಯಾಷನಲ್‌ ಹೆರಾಲ್ಡ್‌ ಕಚೇರಿ ಸೇರಿದಂತೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಸುಮಾರು 10 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಮಂಗಳವಾರ ದಾಳಿ ನಡೆಸಿದೆ. ಈ ಪತ್ರಿಕೆಯು ಯಂಗ್ ಇಂಡಿಯಾ ಲಿಮಿಟೆಡ್ ಒಡೆತನದಲ್ಲಿದೆ, ಇದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿಯವರಿಗೆ ಸೇರಿದ ಕಂಪನಿಯಾಗಿದೆ.

ಸೋನಿಯಾ ಹಾಗೂ ರಾಹುಲ್‌ ಗಾಂಧಿಯವರು ಸಂದಿಗ್ಧ ಹಣಕಾಸಿನ ವ್ಯವಹಾರದ ಮೂಲಕ ನ್ಯಾಷನಲ್‌ ಹೆರಾಲ್ಡ್‌ ಗೆ ಸೇರಿದ ಮೌಲ್ಯಯುತವಾದ ಸ್ಥಿರಾಸ್ಥಿಯನ್ನು ಪಡೆಯಲು ಪಕ್ಷದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಇವರಿಬ್ಬರೂ ಆರೋಪಗಳನ್ನು ನಿರಾಕರಿಸಿದ್ದಾರೆ ಎನ್ನಲಾಗಿದೆ.

ನ್ಯಾಷನಲ್ ಹೆರಾಲ್ಡ್ 1938 ರಲ್ಲಿ ಜವಾಹರಲಾಲ್ ನೆಹರು ಅವರು ಇತರ ಸ್ವಾತಂತ್ರ್ಯ ಹೋರಾಟಗಾರರೊಂದಿಗೆ ಸ್ಥಾಪಿಸಿದ ಪತ್ರಿಕೆಯಾಗಿದೆ. ಸ್ವಾತಂತ್ರ್ಯಾನಂತರ ಕಾಂಗ್ರೆಸ್‌ ಪಕ್ಷದ ಮುಖವಾಣಿಯಾಗಿ ಬದಲಾದ ಈ ಪತ್ರಿಕೆಯು ಮಾರಾಟವಿಲ್ಲದೇ 90 ಕೋಟಿಗೂ ಅಧಿಕ ಸಾಲದೊಂದಿಗೆ 2008ರಲ್ಲಿ ಸ್ಥಗಿತಗೊಂಡಿತು. ಆದರೆ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿಗಳು ಕಂಪನಿಯ ಹೆಸರಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!