ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯಾಷಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿಗೆ ಜೂನ್ 13ಕ್ಕೆ ಹಾಜರಾಗುವಂತೆ ಹೊಸ ನೋಟೀಸ್ ಜಾರಿ ಮಾಡಲಾಗಿದೆ.
ಈ ಹಿಂದೆ ಜೂ.೨ ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆಧರೆ ಪ್ರಸ್ತುತ ವಿದೇಶದಲ್ಲಿರುವ ಕಾರಣ ವಿಚಾರಣೆಗೆ ಹಾಜರಾಗಲು ರಾಹುಲ್ ಗಾಂಧಿ ಹೆಚ್ಚಿನ ಕಾಲಾವಕಾಶ ಕೇಳಿದ್ದರು. ಅವರ ಕೋರಿಕೆಯನ್ನು ಮನ್ನಿಸಲಾಗಿದ್ದು ಪ್ರಸ್ತುತ ಜೂ. 13ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೂತನ ನೋಟಿಸ್ ನೀಡಲಾಗಿದೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಯೆ ಪ್ರಕಾಶಕರುಗಳನ್ನು ಖರೀದಿಸುವ ಮೂಲಕ ಅಕ್ರಮ ಹಣವರ್ಗಾವಣೆ ಮಾಡಲಾಗಿದೆ ಎಂಬ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಸಿಯವರಿಗೆ ಇಡಿ ಸಮನ್ಸ್ ನೀಡಿತ್ತು. ಆದರೆ ನಿನ್ನೆ ಸೋನಿಯಾ ಗಾಂಧಿಯವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ರಾಹುಲ್ ಗಾಂಧಿ ಹೆಚ್ಚಿನ ಕಾಲಾವಕಾಶ ಕೋರಿದ್ದರು.