Wednesday, December 31, 2025

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ನೊಟೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ನೊಟೀಸ್ ನೀಡಿದೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ಇ.ಡಿ ನೀಡಿರುವ ದೂರಿನ ಮೇರೆಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ಎಫ್‌ಐಆರ್ ದಾಖಲಿಸಿತ್ತು. ಅ.3ರಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಮೇಲೆ ಪ್ರಕರಣ ದಾಖಲಿಸಿಕೊಂಡಿತ್ತು. ಅದೇ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ಗೂ ನೊಟೀಸ್ ಜಾರಿಯಾಗಿತ್ತು. ಸದ್ಯ ಡಿಕೆಶಿ ಆಪ್ತ ಇನಾಯತ್ ಅಲಿಗೂ ದೆಹಲಿ ಪೊಲೀಸರು ತನಿಖೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ ಸಂಸ್ಥೆಯಿಂದ ಕಳೆದ ಹಲವು ವರ್ಷಗಳಿಂದ ಇನಾಯತ್ ಅಲಿಯ ತನಿಖೆಯಾಗಿತ್ತು. ಅದರ ಮುಂದುವರಿದ ಭಾಗವಾಗಿ ಇದೀಗ ದೆಹಲಿ ಪೊಲೀಸರಿಂದ ನೊಟೀಸ್ ಜಾರಿಯಾಗಿದೆ.

ಸದ್ಯ ಈ ಪ್ರಕರಣ ಸಂಬಂಧ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್‌ಗೂ ದೆಹಲಿ ಪೊಲೀಸರು ನೊಟೀಸ್ ನೀಡಿದ್ದಾರೆ.

error: Content is protected !!