ನ್ಯಾಷನಲ್ ಹೆರಾಲ್ಡ್ ಆಸ್ತಿ ಸೇಡಿನ ರಾಜಕೀಯದಿಂದ ವಶ: ಮಲ್ಲಿಕಾರ್ಜುನ ಖರ್ಗೆ ಆರೋಪ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ನಾಯಕ ಸೋನಿಯಾ ಮತ್ತು ರಾಹುಲ್ ಗಾಂಧಿ ವಿರುದ್ಧದ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇಡಿ ಚಾರ್ಚ್ ಶೀಟ್ ನಲ್ಲಿ ಪಕ್ಷದ ಮಾಜಿ ಮುಖ್ಯಸ್ಥರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಹೆಸರಿದೆ ಮತ್ತು ದೆಹಲಿ, ಲಖನೌ ಮತ್ತು ಮುಂಬೈನಲ್ಲಿರುವ ನ್ಯಾಷನಲ್ ಹೆರಾಲ್ಡ್ ಆಸ್ತಿಗಳನ್ನು ಸೇಡಿನ ರಾಜಕೀಯದಿಂದ ವಶಕ್ಕೆ ಪಡೆಯಲಾಗಿದೆ ಎಂದು ಆರೋಪಿಸಿದರು.

ವಕ್ಫ್ ವಿಷಯದ ಬಗ್ಗೆ ವದಂತಿಗಳನ್ನು ಹರಡುವಲ್ಲಿ ಸರ್ಕಾರ, ಬಿಜೆಪಿ ನಾಯಕರು ಯಾವುದೇ ಅವಕಾಶವನ್ನು ಬಿಟ್ಟುಕೊಟ್ಟಿಲ್ಲ ನಾವು ಜನರ ನಡುವೆ ಹೋಗಿ ಬಿಜೆಪಿಯ ಪಿತೂರಿಯನ್ನು ಬಹಿರಂಗಪಡಿಸಬೇಕು ಎಂದರು.

ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಉಲ್ಲೇಖಿಸಿದ ಅವರು, ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಪ್ರಸ್ತಾಪಿಸಿದ ಅಂಶಗಳಿಗೆ ಸುಪ್ರೀಂ ಕೋರ್ಟ್ ಪ್ರಾಮುಖ್ಯತೆ ನೀಡಿರುವುದು ನನಗೆ ಖುಷಿ ತಂದಿದೆ ಎಂದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!