ನ್ಯಾಷನಲ್ ಹೆರಾಲ್ಡ್ ಹಗರಣ: ಮಲ್ಲಿಕಾರ್ಜುನ ಖರ್ಗೆಗೆ 4.30 ಗಂಟೆಗಳ ಇಡಿ ಡ್ರಿಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ನ್ಯಾಷನಲ್ ಹೆರಾಲ್ಡ್ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ) ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗು ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಕೂಡ ಸಂಸತ್‌ ಅಧಿವೇಶನ ನಡೆಯುತ್ತಿದ್ದಾಗಲೇ ಸಮನ್ಸ್‌ ನೀಡಿ ವಿಚಾರಣೆಗೆ ಕರೆದಿದೆ.

ಈ ಹಿನ್ನೆಲೆಯಲ್ಲಿ ಖರ್ಗೆ ದೆಹಲಿಯಲ್ಲಿ ನಾಲ್ಕೂವರೆ ಗಂಟೆಗಳ ಕಾಲ ಇಡಿ ಅಧಿಕಾರಿಗಳ ವಿಚಾರಣೆ ಎದುರಿಸಿದ್ದಾರೆ.

ದೆಹಲಿಯಲ್ಲಿರುವ ಹೆರಾಲ್ಡ್​ ಹೌಸ್ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅಧಿಕೃತ ಪ್ರತಿನಿಧಿಯಾಗಿದ್ದಾರೆ. ಈ ಹಿಂದೆಯೂ ಕೂಡ ಇವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿದೆ. ಇದೀಗ ಮತ್ತೊಮ್ಮೆ ವಿಚಾರಣೆ ಎದುರಿಸಿದ್ದಾರೆ. ಈಗಾಗಲೇ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗು ರಾಹುಲ್ ಗಾಂಧಿ ಅವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!