ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರೀಯ ಹೆದ್ದಾರಿಯ ವಾಹನ ಸವಾರರಿಗೆ ಮತ್ತೊಂದು ಶಾಕ್ ಎದುರಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಹಾಸನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸೆಪ್ಟೆಂಬರ್ 1 ರಿಂದ ದರ ಏರಿಕೆ ಮಾಡಿ, ವಾಹನ ಸವಾರರಿಗೆ ಶಾಕ್ ನೀಡಿದೆ.
ಇಂದು ಮಧ್ಯರಾತ್ರಿಯಿಂದ 5 ರೂ. ದರ ಏರಿಕೆಯಾಗಲಿದೆ. ನೆಲಮಂಗಲ ದೇವಿಹಳ್ಳಿ ಎಕ್ಸ್ಪ್ರೆಸ್ ಪ್ರೈವೇಟ್ ಲಿಮಿಟೆಡ್ ಟೋಲ್‌ಗಳಲ್ಲಿ ಏರಿಕೆಯಾಗಿದ್ದು, ನೆಲಮಂಗಲ ಹಾಸನ ರಾಷ್ಟ್ರೀಯ ಹೆದ್ದಾರಿಯ ಟೋಲ್ ಮೂಲಕ ಸಂಚರಿಸುವ ವಾಹನ ಸವಾರರ ಜೇಬಿಗೆ ಕತ್ತರಿ ಬೀಳಲಿದೆ.
ಏಕಮುಖ ಸಂಚಾರಕ್ಕೆ 5 ರೂ., ದ್ವಿಮುಖ ಸಂಚಾರಕ್ಕೆ 10 ರೂ. ದರ ಏರಿಕೆ ಮಾಡಲಾಗಿದೆ.