Friday, December 26, 2025

14ನೇ ವಯಸ್ಸಿನಲ್ಲೇ ರಾಷ್ಟ್ರ ಗೌರವ: ವೈಭವ್ ಸೂರ್ಯವಂಶಿಗೆ ಒಲಿಯಿತು ‘ಬಾಲ ಪ್ರಶಸ್ತಿ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಕ್ರಿಕೆಟ್‌ನ ಭವಿಷ್ಯವೆಂದು ಕರೆಸಿಕೊಳ್ಳುತ್ತಿರುವ 14 ವರ್ಷದ ವೈಭವ್ ಸೂರ್ಯವಂಶಿಗೆ ಮತ್ತೊಂದು ಗೌರವ ಲಭಿಸಿದೆ. ಅಸಾಧಾರಣ ಕ್ರಿಕೆಟ್ ಸಾಧನೆಗಾಗಿ ಅವರಿಗೆ ರಾಷ್ಟ್ರೀಯ ಬಾಲ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ರಾಷ್ಟ್ರಪತಿ ಭವನದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ವೈಭವ್ ಅವರಿಗೆ ನೀಡಿದರು.

ಚಿಕ್ಕ ವಯಸ್ಸಿನಲ್ಲೇ ದೊಡ್ಡ ವೇದಿಕೆಯಲ್ಲಿ ತನ್ನ ಬ್ಯಾಟಿಂಗ್ ಮೂಲಕ ದೇಶದ ಗಮನ ಸೆಳೆದಿರುವ ವೈಭವ್, ವಯಸ್ಸಿಗೆ ಮೀರಿದ ಆತ್ಮವಿಶ್ವಾಸ ಮತ್ತು ನಿರಂತರ ಸಾಧನೆಯಿಂದ ಆಯ್ಕೆ ಸಮಿತಿಯ ಗಮನಕ್ಕೆ ಬಂದಿದ್ದಾರೆ. 2025ರ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡಿದ ಅವರು, ಗುಜರಾತ್ ಟೈಟಾನ್ಸ್ ವಿರುದ್ಧ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದರು.

ಇದನ್ನೂ ಓದಿ:

ದೇಶೀಯ ಕ್ರಿಕೆಟ್‌ನಲ್ಲಿಯೂ ವೈಭವ್ ಅಚ್ಚರಿಯ ಸಾಧನೆ ಮಾಡಿದ್ದಾರೆ. ವಿಜಯ್ ಹಜಾರೆ ಟೂರ್ನಿಯಲ್ಲಿ ಕಡಿಮೆ ಎಸೆತಗಳಲ್ಲಿ ಶತಕ, 150 ಮತ್ತು 190 ರನ್‌ಗಳ ಭರ್ಜರಿ ಇನ್ನಿಂಗ್ಸ್ ಮೂಲಕ ಕ್ರಿಕೆಟ್ ವಲಯವನ್ನು ಬೆಚ್ಚಿಬೀಳಿಸಿದ್ದಾರೆ. ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಶತಕ ಗಳಿಸಿದ ಅತಿ ಕಿರಿಯ ಭಾರತೀಯ ಬ್ಯಾಟ್ಸ್‌ಮನ್ ಎಂಬ ದಾಖಲೆಯೂ ಅವರದಾಗಿದೆ.

error: Content is protected !!