August 12, 2026
Wednesday, August 12, 2026
spot_img

ಜೂನ್ 28ರಂದು ರಾಷ್ಟ್ರೀಯ ಲಸಿಕಾ ದಿನ, ತಪ್ಪದೇ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ: ಖಾದರ್‌ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜೂನ್‌ 28ರಂದು ರಾಷ್ಟ್ರೀಯ ಲಸಿಕಾ ದಿನವಾಗಿದೆ. ಪೋಷಕರು ತಪ್ಪದೇ ತಮ್ಮ ಮಕ್ಕಳಿಗೆ ಪೊಲೀಯೋ ಲಸಿಕೆ ಹಾಕಿಸಬೇಕು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್‌ ಮನವಿ ಮಾಡಿದ್ದಾರೆ.

ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದಲ್ಲಿ ಪೋಲಿಯೋ ವೈರಸ್‌ ಸಕ್ರಿಯವಾಗಿದ್ದು, ಭಾರತಕ್ಕೆ ಮತ್ತೆ ವೈರಸ್‌ ಒಕ್ಕರಿಸುವ ಸಾಧ್ಯತೆ ಇದೆ. ಹೀಗಾಗಿ ಎಲ್ಲ ಪೋಷಕರು ತಪ್ಪದೇ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಹೇಳಿದ್ದಾರೆ.

ಭಾರತವು 140 ಕೋಟಿ ಜನಸಂಖ್ಯೆ, ವೈವಿಧ್ಯಮಯ ಪ್ರದೇಶಗಳು ಮತ್ತು ಸವಾಲುಗಳ ನಡುವೆಯೂ ಪೋಲಿಯೋ ಮುಕ್ತ ರಾಷ್ಟ್ರವಾಗಿ ಹೊರಹೊಮ್ಮಿದೆ. ಇದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪ್ರೋತ್ಸಾಹ, ಆರೋಗ್ಯ ಇಲಾಖೆ, ವೈದ್ಯರು, ನರ್ಸ್‌ಗಳು, ಆಶಾ ಕಾರ್ಯಕರ್ತರು, ಎನ್‌ಜಿಒಗಳು ಮತ್ತು ಶಿಕ್ಷಣ ಇಲಾಖೆಯ ಅವಿರತ ಶ್ರಮದಿಂದ ಸಾಧ್ಯವಾಗಿದೆ ಎಂದು ಹೇಳಿದರು. ಈ ಬಾರಿ ರಾಜ್ಯದಲ್ಲಿ ಸುಮಾರು 64.84 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ನಿಮ್ಮ ಕಡೆಯಿಂದ ಕೇಳುವುದು ಒಂದೇ ತಪ್ಪದೇ ಮಕ್ಕಳನ್ನು ಕರೆತನ್ನಿ. ಎರಡು ಹನಿ ಮಕ್ಕಳ ಜೀವವನ್ನೇ ಉಳಿಸಬಹುದು. ರಾಜ್ಯವನ್ನು ಪೋಲಿಯೋ ಮುಕ್ತ ಮಾಡುವ ಗುರಿ ಎಲ್ಲರ ಮೇಲಿದೆ. ಯಾವ ಊರಿನಲ್ಲಿದ್ದರೂ, ಎಷ್ಟೇ ಬ್ಯುಸಿ ಇದ್ದರೂ ತಪ್ಪದೇ ಲಸಿಕೆ ಹಾಕಿಸಿ ಎಂದು ಮನವಿ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !