Tuesday, May 30, 2023

Latest Posts

ದಸರಾ ಸ್ಫೋಟದ ಸಂಚಿನ ಪ್ರಕರಣ: ಮೂವರು ಉಗ್ರರ ವಿರುದ್ಧ ಎನ್‌ಐಎ ಚಾರ್ಜ್ ಶೀಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದಸರಾ ಸ್ಫೋಟದ ಸಂಚು ಪ್ರಕರಣದಲ್ಲಿ ಎನ್‌ಐಎ ಮೂವರು ಲಷ್ಕರ್-ಎ-ತೊಯ್ಬಾ ಉಗ್ರರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದೆ. ಮೂವರು ಲಷ್ಕರ್-ಎ-ತೊಯ್ಬಾ ಉಗ್ರರ ಪಾತ್ರವನ್ನು ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಅಬ್ದುಲ್ ವಾಜಿದ್, ಸೈದುದ್ದೀನ್ ಮತ್ತು ಹಸನ್ ಫಾರೂಕ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಈ ಮೂವರು ಭಯೋತ್ಪಾದಕ ಚಟುವಟಿಕೆಗಳಿಗೆ ನಿಧಿ ಸಂಗ್ರಹಿಸಲು ಸಂಚು ರೂಪಿಸಿದ್ದರು ಎಂದು ಎನ್‌ಐಎ ಆರೋಪಿಸಿದೆ. ಅಲ್ಲದೆ, ಸ್ಫೋಟಕಗಳನ್ನು ಜೋಡಿಸಲು ಯತ್ನಿಸಿದ ಆರೋಪವನ್ನೂ ಹೊರಿಸಲಾಗಿದೆ.

ಹೈದರಾಬಾದ್‌ನ ಜನನಿಬಿಡ ಸ್ಥಳಗಳಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಿದ್ದರು ಎಂದು ಎನ್‌ಐಎ ಆರೋಪಪಟ್ಟಿಯಲ್ಲಿ ತಿಳಿಸಿದೆ. ಎಲ್ಲಾ ಆರೋಪಿಗಳು ಫರ್ಹತುಲ್ಲಾ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ.

ಕಳೆದ ಸೆಪ್ಟೆಂಬರ್ 28 ರಂದು ಹೈದರಾಬಾದ್ ಪೊಲೀಸರು ಮೂವರನ್ನು ಬಂಧಿಸಿದ್ದರು. ಗೋರಿ ಮೊಹಮ್ಮದ್ ಅವರ ಆದೇಶದ ಮೇರೆಗೆ
ದಸರಾ ಸಂದರ್ಭದಲ್ಲಿ ಹೈದರಾಬಾದ್‌ನಲ್ಲಿ ದೊಡ್ಡ ಪ್ರಮಾಣದ ಸ್ಫೋಟಗಳನ್ನು ಯೋಜಿಸಲಾಗಿತ್ತು ಎಂಬುದಕ್ಕೆ ಎಸ್‌ಐಟಿ ಅಧಿಕಾರಿಗಳು ಕೆಲವು ಪುರಾವೆಗಳನ್ನು ಸಂಗ್ರಹಿಸಿದ್ದಾರೆ. ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸಲಾಗಿದೆ. ಈ ಹಿಂದೆ ಮೂವರು ಆರೋಪಿಗಳ ವಿರುದ್ಧ ಐಪಿಸಿ 123 ಮತ್ತು 153ಕೆ ಹಾಗೂ ಸ್ಫೋಟಕ ವಸ್ತುಗಳ ಕಾಯ್ದೆಯ 485(6) ಹಾಗೂ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ನಾಲ್ಕು ಹ್ಯಾಂಡ್ ಗ್ರಾನೈಟ್‌ಗಳನ್ನು ಬೇರೆ ದೇಶಗಳಿಂದ ಹೈದರಾಬಾದ್‌ಗೆ ತರಲಾಗಿತ್ತು ಎಂದು ಎಸ್‌ಐಟಿ ಅಧಿಕಾರಿಗಳು ಈ ಹಿಂದೆ ಸಂಗ್ರಹಿಸಿದ್ದರು. ಹವಾಲಾ ರೂಪದಲ್ಲಿ ದೊಡ್ಡ ಮೊತ್ತದ ಹಣ ಕೈ ಬದಲಾಗಿರುವ ಬಗ್ಗೆ ಪೊಲೀಸರು ಕೆಲವು ಪುರಾವೆಗಳನ್ನು ಸಂಗ್ರಹಿಸಿದ್ದಾರೆ. ಶಮಿ ಮತ್ತು ಆಸಿನ್ ಎಂಬ ಇಬ್ಬರು ವ್ಯಕ್ತಿಗಳು ಸ್ಫೋಟಕಗಳನ್ನು ಇಲ್ಲಿಗೆ ತಂದಿದ್ದಾರೆ ಎಂಬುದಕ್ಕೆ ಪುರಾವೆಗಳಿವೆಯಂತೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!