Friday, June 2, 2023

Latest Posts

47ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್‌ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದ ಆಟಗಾರರಿಗೆ ಸನ್ಮಾನ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: 47ನೇ ರಾಷ್ಟ್ರೀಯ ಜೂನಿಯರ್ ವಾಲಿಬಾಲ್‌ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ್ದ ಕರ್ನಾಟಕದ ಆಟಗಾರರಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ನಾರಾಯಣಗೌಡ ಸನ್ಮಾನಿಸಿದರು.

ಪಶ್ಚಿಮ ಬಂಗಾಳದ ಬುರ್ದ್ವಾನ್‌ನಲ್ಲಿ ನಡೆದ ಜ್ಯೂನಿಯರ್ ವಾಲಿಬಾಲ್ ಚಾಂಪಿಯನ್ ಶಿಪ್‌ ಟೂರ್ನಿಯಲ್ಲಿ ಕರ್ನಾಟಕದ ಪುರುಷರ ತಂಡ ದ್ವಿತೀಯ ಸ್ಥಾನ ಪಡೆದಿದೆ. ತಮಿಳುನಾಡಿನ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 3-1 ರಲ್ಲಿ ಪರಾಭವಗೊಳ್ಳುವ ಮೂಲಕ ಕರ್ನಾಟಕ ತಂಡ ರಜತ ಪದಕ ಪಡೆದಿದೆ. ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದ ಮಹಿಳೆಯರ ತಂಡ 8ನೇ ಸ್ಥಾನ ಗಳಿಸಿದೆ.

ಬುರ್ದ್ವಾನ್‌ನಲ್ಲಿ ನಡೆದ ವಾಲಿಬಾಲ್ ನ್ಯಾಷನಲ್ ಚಾಂಪಿಯನ್‌ಶಿಪ್ ನಲ್ಲಿ ಪಾಲ್ಗೊಂಡು ಕರ್ನಾಟಕದ ಆಟಗಾರರು ಉತ್ತಮ ಸಾಧನೆ ಮಾಡಿದ್ದಾರೆ. ಪುರುಷರ ತಂಡ ಫೈನಲ್‌ ಪಂದ್ಯದಲ್ಲಿ ಸ್ವಲ್ಪ ಹಿನ್ನಡೆಯಿಂದ ಚಿನ್ನದ ಪದಕ ತಪ್ಪಿದೆ. ಆದರೆ, ಮುಂದಿನ ಟೂರ್ನಿಯಲ್ಲಿ ನಮ್ಮ ಕರ್ನಾಟಕ ತಂಡ ಚಿನ್ನದ ಪದಕ‌ ಗೆಲ್ಲುವ ವಿಶ್ವಾಸವಿದೆ. ನಮ್ಮ ವಾಲಿಬಾಲ್ ಕ್ರೀಡಾಪಟುಗಳಿಗೆ ರಾಜ್ಯ ಸರಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಸಚಿವ ನಾರಾಯಣಗೌಡ ತಿಳಿಸಿದರು.

ಕರ್ನಾಟಕ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷ, ಮಾಜಿ ಉಪಮಹಾಪೌರರು ಎಸ್. ಹರೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!