October 28, 2026
Wednesday, October 28, 2026
spot_img

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್: ಚಿನ್ನ, ಬೆಳ್ಳಿ ಪದಕ ಮುಡಿಗೇರಿಸಿಕೊಂಡ ಮಲೆನಾಡಿನ ಪ್ರತಿಭೆ ಆಯುಷ್

ಹೊಸದಿಗಂತ ವರದಿ ಶಿವಮೊಗ್ಗ:

 ಮಲೆನಾಡಿನ ಕ್ರೀಡಾ ಪ್ರತಿಭೆ ರಿಪ್ಪನ್ ಪೇಟೆಯ ಆಯುಷ್ ಎಸ್.ಆರ್. ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗೆಲ್ಲುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ತಮಿಳುನಾಡಿನ ಚೆನ್ನೈನಲ್ಲಿ ನಡೆದ 41ನೇ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ U-20 ವಿಭಾಗದಲ್ಲಿ ಆಯುಷ್ ಈ ಗಮನಾರ್ಹ ಸಾಧನೆ ಮಾಡಿದ್ದಾರೆ.

4×100 ಮೀಟರ್ ರಿಲೇ ಓಟದಲ್ಲಿ ತಂಡದ ಸದಸ್ಯರೊಂದಿಗೆ ಅತ್ಯುತ್ತಮ ಪ್ರದರ್ಶನ ನೀಡಿದ ಆಯುಷ್, ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಗೆದ್ದಿದ್ದಾರೆ. ವೈಯಕ್ತಿಕ ವಿಭಾಗದ 200 ಮೀಟರ್ ಓಟದಲ್ಲಿಯೂ ದ್ವಿತೀಯ ಸ್ಥಾನ ಪಡೆದು ಬೆಳ್ಳಿಯ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. 

ರಿಪ್ಪನ್ ಪೇಟೆಯ ರಾಘವೇಂದ್ರ ಎಸ್.ಎಂ. ಮತ್ತು ಮಂಜುಳಾ ದಂಪತಿಯ ಪುತ್ರನಾಗಿರುವ ಆಯುಷ್, ಕಳೆದ ಐದು ವರ್ಷಗಳಿಂದ ಅಥ್ಲೆಟಿಕ್ಸ್‌ನಲ್ಲಿ ನಿರಂತರ ಅಭ್ಯಾಸ ಮತ್ತು ಕಠಿಣ ಪರಿಶ್ರಮದ ಮೂಲಕ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಬೆಳೆಸಿಕೊಂಡಿದ್ದಾರೆ.

ಇದನ್ನೂ ಓದಿ:

ಉನ್ನತ ಶಿಕ್ಷಣದೊಂದಿಗೆ ಕ್ರೀಡಾ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡುವ ಗುರಿ ಹೊಂದಿರುವ ಆಯುಷ್, ಬೆಂಗಳೂರಿನ ಕಂಠೀರವ ಕ್ರೀಡಾಂಗಣದ DYES ಕ್ರೀಡಾ ವಸತಿನಿಲಯದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ತರಬೇತುದಾರ ಅಶೋಕ್ ಬಿ. ಮಂಟೂರ್ ಅವರ ಮಾರ್ಗದರ್ಶನದಲ್ಲಿ ಅಭ್ಯಾಸ ಮುಂದುವರಿಸುತ್ತಿದ್ದಾರೆ.

ಆಯುಷ್ ಅವರ ಸಾಧನೆ ಮಲೆನಾಡಿನ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಿದೆ.

Must Read

Skip to toolbar