ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರಮಟ್ಟದ ಬಾಕ್ಸಿಂಗ್ ಪಟು ವಿರಾಜ್ ಮೆಂಡನ್ (29) ಮಂಗಳವಾರ ತನ್ನ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಶಾಂತಿನಗರದಲ್ಲಿ ವಾಸವಿದ್ದ ವಿರಾಜ್, ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು.
ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ ಯುವಕನ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮಲ್ಪೆ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.