ತ್ರಿಪುರಾದಲ್ಲಿ ಎನ್‌ಎಲ್‌ಎಫ್‌ಟಿ, ಎಲ್‌ಟಿಟಿಎಫ್‌ ನಿಷೇಧಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತ್ರಿಪುರಾದ ನ್ಯಾಷನಲ್ ಲಿಬರೇಶನ್ ಫ್ರಂಟ್ ಆಫ್ ತ್ರಿಪುರಾ, ಆಲ್ ತ್ರಿಪುರಾ ಟೈಗರ್ ಫೋರ್ಸ್‌ ಸಂಘಟನೆಗಳ ಎಲ್ಲಾ ಬಣಗಳು ಮತ್ತು ಅಂಗಸಂಸ್ಥೆಗಳನ್ನು ಐದು ವರ್ಷಗಳ ಕಾಲ ಕೇಂದ್ರ ಸರಕಾರ ನಿಷೇಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿಯಲ್ಲಿ ಮಾಡಲಾದ ಘೋಷಣೆಯು ಬುಧವಾರದಿಂದಲೇ ಜಾರಿಗೆ ಬರುವಂತೆ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ.

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ, 1967 ಸೆಕ್ಷನ್ 3 ರ ಉಪ-ವಿಭಾಗ 1ರ ಮೂಲಕ ಕೇಂದ್ರವು ಈ ನಿಷೇಧವನ್ನು ವಿಧಿಸಿದೆ. ಈ ಎರಡು ಗುಂಪುಗಳು ತ್ರಿಪುರಾದಲ್ಲಿ ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿವೆ ಎಂದು ಕೇಂದ್ರ ಹೇಳಿದೆ. ಇತ್ತೀಚೆಗೆ, ಈ ಗುಂಪುಗಳು ಹಿಂಸಾತ್ಮಕ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡಿವೆ, ಇದು ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ಹಾಳುಮಾಡುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.

ಈ ಸಂಘಟನೆಗಳ ಕಾರ್ಯಕರ್ತರು ತ್ರಿಪುರಾದ ವ್ಯಾಪಾರಿಗಳಿಂದ ನಿಧಿ ಸಂಗ್ರಹಿಸುವುದು, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಂಗ್ರಹಿಸುವಂತಹ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಪ್ರತ್ಯೇಕತಾವಾದಿ, ವಿಧ್ವಂಸಕ ಮತ್ತು ಹಿಂಸಾತ್ಮಕ ಚಟುವಟಿಕೆಗಳನ್ನು ತಡೆಯಲು ಈ ಎರಡು ಸಂಘಟನೆಗಳ ಮೇಲೆ ನಿಷೇಧ ಹೇರಲಾಗಿದೆ ಎಂದು ಕೇಂದ್ರ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!