ನ್ಯಾಷನಲ್‌ ಹೆರಾಲ್ಡ್‌ ಹಣಕಾಸು ಅಕ್ರಮ: ಜೂ.13ರಂದು ಹಾಜರಾಗುವಂತೆ ರಾಹುಲ್‌ ಗಾಂಧಿಗೆ ಸಮನ್ಸ್ ಜಾರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ನ್ಯಾಷನಲ್‌ ಹೆರಾಲ್ಡ್‌ ಹಣಕಾಸು ಅಕ್ರಮಕ್ಕೆ ಸಂಬಂಧಿಸಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಮತ್ತೆ ಸಮನ್ಸ್‌ ಜಾರಿ ಮಾಡಿದೆ.
ಜೂ. 13ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ರಾಹುಲ್‌ ಗಾಂಧಿಯವರು ಸದ್ಯ ವಿದೇಶ ಪ್ರವಾಸದಲ್ಲಿ ಇರುವುದರಿಂದ ವಿಚಾರಣೆ ದಿನ ಬದಲಿಸುವಂತೆ ಕೇಂದ್ರ ತನಿಖಾ ಸಂಸ್ಥೆಗೆ ಮನವಿ ಮಾಡಿಕೊಂಡಿದ್ದರು.
ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಜೂ.8ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಸೂಚನೆ ನೀಡಿದೆ.ಆದರೆ, ಅವರಿಗೆ ಬುಧವಾರ ಕೊರೋನಾ ದೃಢಪಟ್ಟಿರುವುದರಿಂದ ಕ್ವಾರಂಟೈನ್‌ನಲ್ಲಿ ಇದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!