ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮನೆಗೆ ನುಗ್ಗಲು ಯತ್ನಿಸಿದ ವ್ಯಕ್ತಿ ಪೊಲೀಸರ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನಿವಾಸಕ್ಕೆ ವ್ಯಕ್ತಿಯೊಬ್ಬ ಏಕಾಏಕಿ ನುಗ್ಗಲು ಯತ್ನಿಸಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ವ್ಯಕ್ತಿಯೊಬ್ಬ ಕಾರ್‌ನಲ್ಲಿ ಬಂದು ದೋಲವ್ ಅವರ ಮನೆಗೆ ನುಗ್ಗಲು ವ್ಯಕ್ತಿ ಪ್ರಯತ್ನಿಸುತ್ತಿರುವಾಗ ಭದ್ರತಾ ಸಿಬ್ಬಂದಿ ಗಮನಿಸಿದ್ದಾರೆ.
ತಕ್ಷಣವೇ ಆತನನ್ನು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪೊಲೀಸರು ಆಗಮಿಸಿದ್ದು, ಆತನನ್ನು ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ಮಾಹಿತಿ ಅನ್ವಯ ಆತ ಮಾನಸಿಕ ಅಸ್ವಸ್ಥ, ಬಾಡಿಗೆ ಕಾರು ಓಡಿಸಿಕೊಂಡಿದ್ದ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!