ರಾಷ್ಟ್ರೀಯ ತಂತ್ರಜ್ಞಾನ ದಿನ: ಇಂದು ಪ್ರಧಾನಿಯಿಂದ 5,800 ಕೋಟಿ ಮೊತ್ತದ ಯೋಜನೆಗಳ ಶಂಕುಸ್ಥಾಪನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ರಾಷ್ಟ್ರೀಯ ತಂತ್ರಜ್ಞಾನ ದಿನ 2023ರ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮವು ಮೇ 11-14ರ ವರೆಗೆ ನಡೆಯಲಿರುವ ರಾಷ್ಟ್ರೀಯ ತಂತ್ರಜ್ಞಾನ ದಿನದ 25 ನೇ ವಾರ್ಷಿಕೋತ್ಸವದ ಆಚರಣೆಯಾಗಿದೆ.

ಈ ವೇಳೆ ಪ್ರಧಾನಿ ಮೋದಿ 5800 ಕೋಟಿಗೂ ಹೆಚ್ಚು ಮೌಲ್ಯದ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಗೆ ಸಂಬಂಧಿಸಿದ ಅನೇಕ ಯೋಜನೆಗಳ ಶಂಕುಸ್ಥಾಪನೆ ಮಾಡಲಿದ್ದಾರೆ.

ಭಾರತದ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಗೆ ಶ್ರಮಿಸಿದ ಮತ್ತು ಮೇ 1998ರಲ್ಲಿ ಪೋಕ್ರಾನ್ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸುವಂತೆ ಮಾಡಿದ ಭಾರತೀಯ ವಿಜ್ಞಾನಿಗಳು, ಎಂಜಿನಿಯರ್‌ಗಳು ಮತ್ತು ತಂತ್ರಜ್ಞರನ್ನು ಗೌರವಿಸಲು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು 1999 ರಲ್ಲಿ ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆಯನ್ನು ಪ್ರಾರಂಭಿಸಿದರು.

ಅಂದಿನಿಂದ ಪ್ರತಿ ವರ್ಷ ಮೇ 11 ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!