ರಾಷ್ಟ್ರೀಯ ಏಕತಾ ದಿನ 2023: ಈ ದಿನದ ಇತಿಹಾಸ ಮತ್ತು ಮಹತ್ವ ತಿಳಿಯಿರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪ್ರತಿ ವರ್ಷ ಅಕ್ಟೋಬರ್ 31ರಂದು ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಗುತ್ತದೆ. ಈ ದಿನವನ್ನು ಭಾರತದ ಮೊದಲ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯ ಪ್ರಯಕ್ತ ಆಚರಿಸಲಾಗುತ್ತದೆ.

ಭಾರತದ ಒಕ್ಕೂಟದ ಅಡಿಯಲ್ಲಿ ರಾಜ ಸಂಸ್ಥಾನಗಳನ್ನು ಒಟ್ಟುಗೂಡಿಸುವ ಮೂಲಕ ರಾಜ್ಯಗಳ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರನ್ನು ‘ಭಾರತದ ಉಕ್ಕಿನ ಮನುಷ್ಯ’ ಎಂದು ಕರೆಯಲಾಗುತ್ತದೆ. ಈ ವರ್ಷ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 147ನೇ ಜನ್ಮದಿನವನ್ನು ಆಚರಿಸಲಾಗುತ್ತಿದೆ. ಏಕತೆ ಮತ್ತು ಸಮಾಜವನ್ನು ಉನ್ನತೀಕರಿಸುವ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವ ಇಲ್ಲಿ ತಿಳಿಯಿರಿ.

ರಾಷ್ಟ್ರೀಯ ಏಕತಾ ದಿನದ ಇತಿಹಾಸ ಮತ್ತು ಮಹತ್ವ:

2014 ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರನ್ ಫಾರ್ ಯೂನಿಟಿ ಎಂಬ ವಿಷಯದೊಂದಿಗೆ ಈ ದಿನವನ್ನು ಪರಿಚಯಿಸಿದರು. ಅಂದಿನಿಂದ ಪ್ರತಿವರ್ಷ ಪಟೇಲ್‌ ಅವರ ಜನ್ಮದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸುವುದಾಗಿ ಘೋಷಿಸಿದರು.

ಈ ದಿನವನ್ನು ರಾಷ್ಟ್ರದ ಏಕತೆ, ಸಮಗ್ರತೆ ಮತ್ತು ಭದ್ರತೆಯನ್ನು ಬಲಪಡಿಸುವುದು ಮತ್ತು ವಲ್ಲಭಭಾಯಿ ಪಟೇಲ್ ಅವರ ಕೊಡುಗೆಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಆಚರಿಸಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!