ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಕೆವಾಡಿಯಾದಲ್ಲಿರುವ ಏಕತಾ ಪ್ರತಿಮೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ್ದಾರೆ.
ಪಟೇಲ್ ಅವರನ್ನು ಗೌರವಿಸಿದ ನಂತರ, ಪ್ರಧಾನಮಂತ್ರಿಯವರು ಏಕತಾ ಪ್ರಮಾಣ ಬೋಧಿಸಿದರು ಮತ್ತು ಕೆವಾಡಿಯಾದ ಪರೇಡ್ ಮೈದಾನದಲ್ಲಿ ‘ರಾಷ್ಟ್ರೀಯ ಏಕತಾ ದಿವಸ್’ ಪರೇಡ್ ನಲ್ಲಿ ಭಾಗವಹಿಸಿದರು.
ಇಂದು ಮುಂಜಾನೆ ಪ್ರಧಾನಿ ಮೋದಿ ಅವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುತ್ಥಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
“ಭಾರತ ರತ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ಅವರಿಗೆ ನನ್ನ ನಮನಗಳು. ರಾಷ್ಟ್ರದ ಏಕತೆ ಮತ್ತು ಸಾರ್ವಭೌಮತ್ವವನ್ನು ರಕ್ಷಿಸುವುದು ಅವರ ಜೀವನದ ಪ್ರಮುಖ ಆದ್ಯತೆಯಾಗಿದೆ. ಅವರ ವ್ಯಕ್ತಿತ್ವ ಮತ್ತು ಕೆಲಸವು ದೇಶದ ಪ್ರತಿ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.