ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಇಂದು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಪ್ರಧಾನಿ ಮೋದಿ ಏಕತಾ ಪ್ರತಿಮೆಗೆ ಭೇಟಿ ನೀಡಿ ಗೌರವ ಸಲ್ಲಿಸಲಿದ್ದಾರೆ.
ಏಕತಾ ದಿನದಂದು ಪಟೇಲ್ ಅವರಿಗೆ ಗೌರವ ಸಲ್ಲಿಸಲಿದ್ದಾರೆ. ಗುಜರಾತ್‌ನ ಮೋರ್ಬಿ ಸೇತುವೆ ದುರಂತ ಹಿನ್ನೆಲೆ ಯಾವುದೇ ಸಂಭ್ರಮಾಚರಣೆ ಇರುವುದಿಲ್ಲ. ಪ್ರತಿ ವರ್ಷವೂ ಪ್ರಧಾನಿ ಮೋದಿ ಅವರು ಏಕತಾ ಪ್ರತಿಮೆಗೆ ಭೇಟಿ ನೀಡಿ ಗೌರವ ಸಲ್ಲಿಸುತ್ತಾರೆ. ಅಂತೆಯೇ ಈ ಬಾರಿಯೂ ಗೌರವ ಸಲ್ಲಿಸಲಿದ್ದು, ಸಂಭ್ರಮಾಚರಣೆ ಇರುವುದಿಲ್ಲ.
ಈ ಬಗ್ಗೆ ಗುಜರಾತ್ ಮಾಧ್ಯಮ ಸಂಚಾಲಕ ಡಾ. ಯಜ್ಞೇಶ್ ದವೆ ಮಾತನಾಡಿದ್ದು, ಪ್ರಧಾನಿ ಮೋದಿಯವರು ಪ್ರತಿಮೆಗೆ ಗೌರವ ಸಲ್ಲಿಸಲಿದ್ದಾರೆ. ಮೋರ್ಬಿ ದುರಂತದಲ್ಲಿ ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ಮೃತಪಟ್ಟಿದ್ದಾರೆ. 100 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಕಾರ್ಯಾಚರಣೆ ಇನ್ನೂ ಜಾರಿಯಲ್ಲಿದೆ ಎಂದಿದ್ದಾರೆ.
2,900 ಕೋಟಿ ರೂ. ಮೌಲ್ಯದ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಇತರೆ ಕಾರ್ಯಕ್ರಮಗಳು ಹಿಂದಿನ ವೇಳಾಪಟ್ಟಿಯಂತೆ ನಡೆಯಲಿದೆ.