Sunday, February 5, 2023

Latest Posts

ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವಜನೋತ್ಸವ: ಪ್ರಧಾನಿ ಮೋದಿ ಉದ್ಘಾಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವಜನೋತ್ಸವ ನಡೆಯಲಿದ್ದು, ಪ್ರಧಾನಿ ಮೋದಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮದಿನ ನಿಮಿತ್ತ ರಾಷ್ಟ್ರೀಯ ಯುವಜನೋತ್ಸವ ಆಚರಿಸಲಾಗುತ್ತಿದ್ದು, ಈ ಬಾರಿ ಜನವರಿ 12 ರಂದು ಕಾರ್ಯಕ್ರಮ ನಡೆಯಲಿದೆ.

ಬೇರೆ ಬೇರೆ ರಾಜ್ಯಗಳ ಒಟ್ಟಾರೆ 7,500 ತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಾರ್ಯಕ್ರಮದ ರೂಪುರೇಷೆ, ನಿರ್ವಹಣೆ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಸಭೆ ನಡೆಸಿದ್ದು, ಸಭೆಯಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದ ಉದ್ಘಾಟನೆ ಮಾಡುತ್ತಾರೆ ಎಂದು ತಿಳಿಸಿದ್ದಾರೆ.
ಪ್ರತಿನಿಧಿಗಳಿಗೆ ಊಟ ಉಪಚಾರ, ವಸತಿ ಹಾಗೂ ಇನ್ನಿತರ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾತುಕತೆ ನಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!