ಹೊಸದಿಗಂತ ವರದಿ, ಹುಬ್ಬಳ್ಳಿ:
ನಗರದ ರೈಲ್ವೆ ಮೈದಾನದಲ್ಲಿ ನಡೆಯಲಿರುವ 26 ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟಿಸಲು ಆಗಮಿಸಿದ ಪ್ರಧಾನಿ ಮೋದಿಯವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದರು.
ಬಳಿಕ ಝಡ್ ಫ್ಲಸ್ ಭದ್ರತಾ ಸಿಬ್ಬಂದಿಯೊಂದಿಗೆ ವಿಮಾನ ನಿಲ್ದಾಣದಿಂದ ಕೇಶ್ವಾಪೂರ ರಸ್ತೆಯ ರೈಲ್ವೆ ಮೈದಾನಕ್ಕೆ ತೆರಳಿದರು. ವಿಮಾನ ನಿಲ್ದಾಣ ಹೊರ ಬರುತ್ತಲೆ ಕಾರಿನಿಂದ ಕೆಳಗಿಳಿದು ಜನರತ್ತ ಕೈಬಿಸಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರ ಹಾಗೂ ಜನರ ಹರಷೋದ್ಗಾರ ಮುಗಿಲು ಮುಟ್ಟಿತು.