ಆ.17ರಿಂದ ದೇಶವ್ಯಾಪಿ ‘ಮತದಾರ ಅಧಿಕಾರ ಯಾತ್ರೆ’: ಮತದಾನ ಕಳ್ಳತನ ವಿರುದ್ಧ ರಾಗಾ ಹೋರಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರದಲ್ಲಿ ಆಗಸ್ಟ್ 17ರಿಂದ ಆರಂಭಗೊಳ್ಳುವ ‘ಮತದಾರ ಅಧಿಕಾರ ಯಾತ್ರೆ’ ಮೂಲಕ ದೇಶವ್ಯಾಪಿ ಮತದಾನ ಕಳ್ಳತನ ವಿರುದ್ಧ ಹೋರಾಟಕ್ಕೆ ಇಳಿಯುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಇದು ಕೇವಲ ಚುನಾವಣೆಯ ವಿಷಯವಲ್ಲ. ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ‘ಒಬ್ಬ ವ್ಯಕ್ತಿ, ಒಂದು ಮತ’ ತತ್ವವನ್ನು ರಕ್ಷಿಸಲು ನಡೆಯುತ್ತಿರುವ ನಿರ್ಣಾಯಕ ಹೋರಾಟ. ದೇಶಾದ್ಯಂತ ಮತದಾರರ ಪಟ್ಟಿಯಲ್ಲಿನ ಶುದ್ಧೀಕರಣವೇ ಈ ಅಭಿಯಾನದ ಪ್ರಮುಖ ಗುರಿ. ಯುವಕರು, ಕಾರ್ಮಿಕರು, ರೈತರು ಸೇರಿದಂತೆ ದೇಶದ ಪ್ರತಿಯೊಬ್ಬ ನಾಗರೀಕನು ಈ ಹೋರಾಟದಲ್ಲಿ ಭಾಗವಹಿಸಬೇಕು ಎಂದು ರಾಹುಲ್ ಗಾಂಧಿ ಕರೆ ನೀಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!