ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ನೈಸರ್ಗಿಕ ವಿಕೋಪವು ದೇಶದ ಹಲವು ಭಾಗಗಳಲ್ಲಿ ಊಹಿಸಲಾಗದ ಬಿಕ್ಕಟ್ಟನ್ನು ಸೃಷ್ಟಿಸಿದೆ. ಈ ಬಿಕ್ಕಟ್ಟಿನಿಂದ ಬಳಲುತ್ತಿರುವ ಎಲ್ಲಾ ಕುಟುಂಬಗಳಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಒಟ್ಟಾಗಿ ಎಲ್ಲ ತೊಂದರೆಗಳಿಂದ ಮುಕ್ತಿ ಹೊಂದಿ ಕ್ಷಿಪ್ರಗತಿಯಲ್ಲಿ ಮುನ್ನಡೆಯುತ್ತೇವೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
77ನೇ ಸ್ವಾತಂತ್ರ್ಯೋತ್ಸವ ದಿನದ ಪ್ರಯುಕ್ತ ದೆಹಲಿಯ ಕೆಂಪು ಕೋಟೆಯಲ್ಲಿ ದೇಶವಾಸಿಗಳನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದರು. ಈ ವೇಳೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಹಲವು ಭಾಗಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ಪ್ರವಾಹದ ಪರಿಸ್ಥಿತಿಯನ್ನು ಅವರು ನೆನೆದರು. ಅಲ್ಲದೆ ತೊಂದರೆಗೊಳಗಾದ ಕುಟುಂಬದವರಿಗೆ ಸಂತಾಪ ವ್ಯಕ್ತಪಡಿಸಿದರು.