ನಾಳೆ ಮುಂಜಾನೆ 3 ಗಂಟೆಗೆ ಬೆಂಗಳೂರಿಗೆ ಬರಲಿದೆ ನವೀನ್ ಪಾರ್ಥೀವ ಶರೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಉಕ್ರೇನ್ ನಲ್ಲಿ ಮೃತಪಟ್ಟಂತ ಕರ್ನಾಟಕ ವೈದ್ಯಕೀಯ ವಿದ್ಯಾರ್ಥಿ ನವೀನ್ ಪಾರ್ಥೀವ ಶರೀರ ನಾಳೆ ( ಮಾ.21 ) ಬೆಳಗ್ಗೆ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದೆ.
ನವೀನ್ ಗ್ಯಾನಗೌಡರ್ ಅವರ ಪಾರ್ಥೀವ ಶರೀರ, ನಾಳೆ ಬೆಳಗ್ಗೆ 3 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ನವೀನ್ ಮೃತ ದೇಹವನ್ನು ಸಿಎಂ ಬಸವರಾಜ ಬೊಮ್ಮಾಯಿಯವರು ಬರಮಾಡಿಕೊಳ್ಳಲಿದ್ದಾರೆ.
ಸೋಮವಾರ ಬೆಳಗ್ಗೆ ಮೃತ ನವೀನ್ ಹುಟ್ಟೂರು ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಎಚ್ ಎ ಎಲ್ ವಿಮಾನ‌ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಚಳಗೇರಿಗೆ ತೆರಳಲಿರುವ ಅವರು, ನವೀನ್ ಮೃತ ದೇಹಕ್ಕೆ ಅಂತಿಮ ನಮನ ಸಲ್ಲಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!