ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ನವಗ್ರಹ ಸಿನಿಮಾ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ಗಿರಿ ದಿನೇಶ್ (45) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗಿರಿ ದಿನೇಶ್ ನವಗ್ರಹ ಸಿನಿಮಾದ ಮೂಲಕ ಖ್ಯಾತಿಯನ್ನು ಗಳಿಸಿದ್ದರು. ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿ ದಿನೇಶ್ ಅವರು ಹೃದಯಾಘಾತದಿಂದ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆಯೇ ನಿಧನರಾಗಿದ್ದಾರೆ.