ಪಟಿಯಾಲಾ ಜೈಲಿನಲ್ಲಿ ಮೌನ ಉಪವಾಸ ಆರಂಭಿಸಿದ ನವಜೋತ್ ಸಿಧು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಜೈಲಿನಲ್ಲಿ ಮೌನ ಉಪವಾಸ ವ್ರತ ಆರಂಭಿಸಿದ್ದಾರೆ. ನವರಾತ್ರಿ ಹಬ್ಬದ ಅಂಗವಾಗಿ ಅವರು ಮೌನ ವ್ರತ ಕೈಗೊಂಡಿದ್ದು, ದಸರಾ ದಿನದಂದು ಮುಅಂತ್ಯವಾಗುತ್ತದೆ.

ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು 34 ವರ್ಷಗಳ ಹಿಂದಿನ ಹಲ್ಲೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ನಂತರ ಕಳೆದ ಹಲವು ತಿಂಗಳುಗಳಿಂದ ಪಟಿಯಾಲಾ ಜೈಲಿನಲ್ಲಿದ್ದಾರೆ.

ರಸ್ತೆಯಲ್ಲಿ ನಡೆದ ಜಗಳದಲ್ಲಿ ನಡೆದ ಗುಂಡಿನ ಪ್ರಕರಣದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದ. ನವಜೋತ್ ಸಿಧು ಅವರು ಪಟಿಯಾಲಾದಲ್ಲಿ ಪಾರ್ಕಿಂಗ್ ಜಾಗದ ವಿಚಾರದಲ್ಲಿ ವ್ಯಕ್ತಿಯೊಬ್ಬನೊಂದಿಗೆ ಜಗಳವಾಡಿದ್ದರು.

ಈ ಸಂದರ್ಭದಲ್ಲಿ ಸಿಧು ಅವರೊಂದಿಗೆ ಇನ್ನೊಬ್ಬ ಸ್ನೇಹಿತ ಹಾಜರಿದ್ದ. ಆ ಸಂದರ್ಭದಲ್ಲಿ ಇಬ್ಬರಿಗೂ ಸೇರಿ ವ್ಯಕ್ತಿಗೆ ಥಳಿಸಿದಾಗ ಆತ ಮೃತಪಟ್ಟಿದ್ದ. ಈ ಪ್ರಕರಣದಲ್ಲಿ 2006ರಲ್ಲಿ ಸಿಧು ದೋಷಿ ಎಂದು ಹೈಕೋರ್ಟ್ ತೀರ್ಪು ನೀಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!