ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್ ಕಾಂಗೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ರಸ್ತೆ ಜಗಳ ಪ್ರಕರಣದಲ್ಲಿ 10 ತಿಂಗಳು ಪಟಿಯಾಲದ ಜೈಲಿನಲ್ಲಿದ್ದ ಸಿಧು ಇದೀಗ ಹೊರಬಂದಿದ್ದು, ಮಧ್ಯಾಹ್ನವೇ ಪ್ರೆಸ್ ಮೀಟ್ ಕರೆದಿದ್ದಾರೆ.
1988ರಲ್ಲಿ 65 ವರ್ಷದ ಗುರ್ನಾಮ್ ಸಿಂಗ್ ರಸ್ತೆ ರಂಪಾಟ ಪ್ರಕರಣದಲ್ಲಿ ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ಸಿಧು ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿತ್ತು. ಒಂದು ವರ್ಷದ ಜೈಲು ಶಿಕ್ಷೆಯನ್ನು ನ್ಯಾಯಾಲಯ ವಿಧಿಸಿದ್ದು, ಸನ್ನಡತೆ ಆಧಾರದ ಮೇಲೆ ಅವಧಿಗಿಂತಲೂ ಮುನ್ನವೇ ಅವರನ್ನು ಬಿಡುಗಡೆ ಮಾಡಲಾಗಿದೆ.