ಜೈಲಿಂದ ಆಸ್ಪತ್ರೆಗೆ ನವಜೋತ್ ಸಿಂಗ್ ಸಿಧು ಶಿಫ್ಟ್: ವಿಶೇಷ ಆಹಾರಕ್ಕೆ ಬೇಡಿಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

1988 ರ ರೋಡ್ ರೇಜ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರನ್ನು ಸೋಮವಾರ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ವೈದ್ಯಕೀಯ ಪರೀಕ್ಷೆಗಾಗಿ ಸೋಮವಾರಭಾರೀ ಭದ್ರತೆಯಲ್ಲಿ ಪಟಿಯಾಲಾದ ರಾಜೀಂದ್ರ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಇನ್ನು ನವಜೋತ್ ಸಿಧು ಜೈಲಿನಲ್ಲಿ ವಿಶೇಷ ಆಹಾರಕ್ರಮವನ್ನು ಬಯಸಿದ್ದಾರೆ ಎಂದು ಕ್ರಿಕೆಟಿಗ-ರಾಜಕಾರಣಿಯ ವಕೀಲ ಎಚ್‌ಪಿಎಸ್ ವರ್ಮಾ ಅವರು ಹೇಳಿದ್ದಾರೆ. ವೈದ್ಯರ ತಂಡ ಆಸ್ಪತ್ರೆಯಲ್ಲಿ ನವಜೋತ್ ಸಿಧು ಅವರ ವಿವರವಾದ ವೈದ್ಯಕೀಯ ಪರೀಕ್ಷೆಯನ್ನು ನಡೆಸುತ್ತದೆ ಎಂದು ಅವರು ತಿಳಿಸಿದ್ದಾರೆ.
ವಕೀಲರ ಪ್ರಕಾರ, ನವಜೋತ್ ಸಿಧು ಗೋಧಿ, ಸಕ್ಕರೆ, ಮೈದಾ ಮತ್ತು ಇತರ ಕೆಲವು ಆಹಾರ ಪದಾರ್ಥಗಳನ್ನು ಸೇವಿಸುವಂತಿಲ್ಲ. ಅವರು ಹಣ್ಣುಗಳು, ಪಪ್ಪಾಯಿ, ಪೇರಲ, ಡಬಲ್ ಟೋನ್ಡ್ ಹಾಲು, ಫೈಬರ್ ಮತ್ತು ಕಾರ್ಬೋಹೈಡ್ರೇಟ್‌ಗಳನ್ನು ಹೊಂದಿರದ ಆಹಾರ ಪದಾರ್ಥಗಳನ್ನು ಸೇವಿಸಬಹುದು ಎಂದಿದ್ದಾರೆ.
58 ವರ್ಷ ವಯಸ್ಸಿನ ಕಾಂಗ್ರೆಸ್ ನಾಯಕ ಎಂಬಾಲಿಸಮ್‌ನಂತಹ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಮತ್ತು ಯಕೃತ್ತಿನ ಕಾಯಿಲೆಯನ್ನು ಹೊಂದಿದ್ದಾರೆ.
ಮೇ 20 ರಂದು ಪಂಜಾಬ್ ಮಾಜಿ ಕಾಂಗ್ರೆಸ್ ಮುಖ್ಯಸ್ಥರು ಸ್ಥಳೀಯ ನ್ಯಾಯಾಲಯದ ಮುಂದೆ ಶರಣಾದ ನಂತರ ಪಟಿಯಾ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!