ನವೋದಯ ವಿದ್ಯಾಲಯ ಪ್ರವೇಶಾತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 9 ಮತ್ತು 11ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ನ. 15ರ ವರೆಗೆ ವಿಸ್ತರಿಸಲಾಗಿದೆ.

ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ 2023-24ರ ಶೈಕ್ಷಣಿಕ ಅವಧಿಯಲ್ಲಿ 8ನೇ ಮತ್ತು 10ನೇ ತರಗತಿಯಲ್ಲಿ ಓದುತ್ತಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.

9ನೇ ತರಗತಿಗೆ ಅರ್ಜಿ ಸಲ್ಲಿಸಲು 2009 ಮೇ 05 ರಿಂದ 2011ರ ಜುಲೈ 31 ರ ನಡುವೆ ಜನಿಸಿರಬೇಕು. 11ನೇ ತರಗತಿಗೆ ಅರ್ಜಿ ಸಲ್ಲಿಸಲು 2007 ಜೂನ್ 01 ರಿಂದ 2009 ಜುಲೈ 31 ರ ನಡುವೆ ಜನಿಸಿರಬೇಕು.

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಿರಿ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!