ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರು ಜಿಲ್ಲೆಯ ದಸರೀಘಟ್ಟದ ಶ್ರೀ ಚೌಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಸಂಭ್ರಮ ಮನೆ ಮಾಡಿದೆ.
ಉತ್ಸವದ ಹಿನ್ನೆಲೆಯಲ್ಲಿ ಸಿಂಗಾರಗೊಂಡು ಕಂಗೊಳಿಸುತ್ತಿರುವ ಕ್ಷೇತ್ರ ಭಕ್ತಾದಿಗಳನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತಿದೆ. ಶ್ರೀ ಕ್ಷೇತ್ರದಸರೀಘಟ್ಟದ ಶ್ರೀ ಚೌಡೇಶ್ವರಿ ಅಮ್ಮನವರಿಗೆ ಮಹಾಭಿಷೇಕ ಹಾಗೂ ಶಾಖಾಂಬರಿ ಅಲಂಕಾರ ನೆರವೇರಿಸಲಾಯಿತು.
ಮಂಗಳೂರಿನ ಆದಿಚುಂಚನಗಿರಿ ಶಾಖಾಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಈ ವಿಶೇಷ ಅಲಂಕಾರ ನೆರವೇರಿಸಿದರು.