Sunday, March 26, 2023

Latest Posts

ಅರಬ್ಬಿ ಸಮುದ್ರದಲ್ಲಿ ನೌಕಾಪಡೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಯೋಧರ ರಕ್ಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಭಾರತೀಯ ನೌಕಾಪಡೆಯ ಸ್ವದೇಶಿ ಧ್ರುವ್ ಅತ್ಯಾಧುನಿಕ ಲಘು ಹೆಲಿಕಾಪ್ಟರ್‌ (ಎಎಲ್‌ಹೆಚ್) ಮುಂಬೈ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ದಿನನಿತ್ಯದ ವಿಹಾರದಲ್ಲಿದ್ದಾಗ ಈ ಘಟನೆ ನಡೆದಿದೆ. ತಕ್ಷಣವೇ ಹೆಲಿಕಾಪ್ಟರ್‌ನಲ್ಲಿದ್ದ ಪೈಲಟ್ ಸೇರಿದಂತೆ ಮೂರು ಸಿಬ್ಬಂದಿಯನ್ನು ನೌಕಾ ಗಸ್ತು ಕ್ರಾಫ್ಟ್ ಮೂಲಕ ರಕ್ಷಿಸಲಾಗಿದೆ ಎಂದು ನೌಕಾಪಡೆಯ ವಕ್ತಾರರು ತಿಳಿಸಿದ್ದಾರೆ.

ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!