ಪರಿಷತ್ ಚುನಾವಣೆಯಲ್ಲಿ ಮತ ಚಲಾಯಿಸಲು ಸುಪ್ರಿಂ ಕೋರ್ಟ್‌ ಮೊರೆ ಹೋದ ನವಾಬ್‌ ಮಲ್ಲಿಕ್‌, ಅನೀಲ್‌ ದೇಶ್‌ ಮುಖ್‌ ‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಅಕ್ರಮ ಹಣವರ್ಗಾವಣೆ ಪ್ರಕರಣದ ಅಡಿಯಲ್ಲಿ ಜೈಲುಪಾಲಾಗಿರುವ ಮಹಾರಾಷ್ಟ್ರದ ಇಬ್ಬರು ಶಾಸಕರು ವಿಧಾನ ಪರಿಷತ್‌ ಚುನಾವಣೆಯಲ್ಲಿ ಮತ ಚಲಾಯಿಸಲು ಅನುಮತಿಯನ್ನು ಕೋರಿ ಸುಪ್ರಿಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಮಹಾರಾಷ್ಟ್ರದ ಶಾಸಕರಾದ ನವಾಬ್ ಮಲಿಕ್ ಮತ್ತು ಅನಿಲ್ ದೇಶಮುಖ್ ಅವರು ಎಂಎಲ್‌ಸಿ ಚುನಾವಣೆಯಲ್ಲಿ ಮತ ಚಲಾಯಿಸಲು ಅನುಮತಿ ಕೋರಿ ಸುಪ್ರೀಂ ಕೋರ್ಟ್‌ಗೆ (ಎಸ್‌ಸಿ) ಅರ್ಜಿ ಸಲ್ಲಿಸಿದ್ದಾರೆ. ಪ್ರಸ್ತುತ ಜೈಲಿನಲ್ಲಿರುವ ಇಬ್ಬರೂ ರಾಜಕೀಯ ನಾಯಕರು ಮತದಾನ ಕೋರಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು ಆದರೆ ಶುಕ್ರವಾರ ಬಾಂಬೆ ಹೈಕೋರ್ಟ್‌ ಅನುಮತಿಯನ್ನು ನಿರಾಕರಿಸಿತ್ತು.

ಈ ತೀರ್ಪನ್ನು ಪ್ರಶ್ನಿಸಿ ಪ್ರಸ್ತುತ ಅವರು ಸುಪ್ರಿಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಚುನಾಯಿತ ಪ್ರತಿನಿಧಿಯಾಗಿ ಮತದಾನದ ಶಾಸನಬದ್ಧ ಹಕ್ಕನ್ನು ಹೊಂದಿರುವುದಾಗಿ ಮನವಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!