ಛತ್ತೀಸ್‌ಗಢದಲ್ಲಿ ನಕ್ಸಲ್‌ ದಾಳಿ, ಮೂವರು ಸೈನಿಕರು ಹುತಾತ್ಮ, 14 ಮಂದಿಗೆ ಗಾಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್‌ಗಢದ (Chhattisgarh) ಬಿಜಾಪುರ-ಸುಕ್ಮಾ ಗಡಿಯಲ್ಲಿ ನಕ್ಸಲರು ನಡೆಸಿದ ದಾಳಿಯಲ್ಲಿ ಕನಿಷ್ಠ ಮೂವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿದ್ದಾರೆ.

ಅಧಿಕಾರಿಗಳ ಪ್ರಕಾರ, ಸಿಬ್ಬಂದಿ ಸುಕ್ಮಾ ಜಿಲ್ಲೆಯಲ್ಲಿ ಗಸ್ತು ತಿರುಗುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ.

ನಕ್ಸಲ್ ಚಟುವಟಿಕೆಗಳ ಮೇಲೆ ನಿಗಾ ಇರಿಸಲು ಬಿಜಾಪುರ-ಸುಕ್ಮಾ ಗಡಿಯಲ್ಲಿರುವ ಟೇಕಲ್‌ ಗುಡೆಮ್‌ ನಲ್ಲಿ ಇಂದು ಹೊಸ ಭದ್ರತಾ ಶಿಬಿರವನ್ನು ಸ್ಥಾಪಿಸಲಾಗಿದೆ. ಈ ವೇಳೆ ಜೋನಗುಡ-ಅಲಿಗುಡ ಪ್ರದೇಶದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಮಾವೋವಾದಿಗಳು ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದರು. ಎನ್‌ಕೌಂಟರ್ ಬಳಿಕ ಮಾವೋವಾದಿಗಳು ಕಾಡಿನಲ್ಲಿ ಪರಾರಿಯಾಗಿದ್ದಾರೆ.

ಗಾಯಗೊಂಡ ಎಲ್ಲಾ 14 ಭದ್ರತಾ ಸಿಬ್ಬಂದಿಯನ್ನು ಸುಧಾರಿತ ಚಿಕಿತ್ಸೆಗಾಗಿ ರಾಯ್‌ಪುರಕ್ಕೆ ವಿಮಾನದಲ್ಲಿ ರವಾನಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!