ಹೊಸದಿಗಂತ ಡಿಜಿಟಲ್ ಡೆಸ್ಕ್:
ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ನಕ್ಸಲ್ ಹತನಾಗಿರುವ ಘಟನೆ ಛತ್ತೀಸ್‌ಗಢದ ಬಿಜಾಪುರದಲ್ಲಿ ಮಂಗಳವಾರ ನಡೆದಿದೆ.
ಮಡ್ಡೆದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಂದೆಪರಾ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಇಂದು ಬೆಳಗ್ಗೆ ಎನ್‌ಕೌಂಟರ್ ನಡೆದಿದೆ.
ಜಿಲ್ಲಾ ಮೀಸಲು ಪಡೆ, ಬಸ್ತಾರ್ ಫೈಟರ್, ಪೊಲೀಸರು, ವಿಶೇಷ ಕಾರ್ಯಪಡೆ ಹಾಗೂ ಕೇಂದ್ರೀಯ ಮೀಸಲು ಪೊಲೀಸ್ ಪಡೆ ಕಾರ್ಯಾಚರಣೆ ನಡೆಸಿದರು. ಆ ವೇಳೆ ಎರಡು ಕಡೆ ಗುಂಡಿನ ದಾಳಿ ನಡೆದಿದೆ ಎಂದು ಬಸ್ತಾರ್ ವಲಯದ ಐಜಿಪಿ ಸುಂದರ್‌ರಾಜ್ ಪಿ. ಹೇಳಿದ್ದಾರೆ.
ಹತ್ಯೆಯಾದ ನಕ್ಸಲನ ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನಾ ಸ್ಥಳದಲ್ಲಿ ಎಕೆ-47 ರೈಫಲ್ ಸಿಕ್ಕಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.