ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಅರಣ್ಯ ಪ್ರದೇಶದಲ್ಲಿ ಎನ್ ಕೌಂಟರ್ ನಲ್ಲಿ ಹತನಾದ ನಕ್ಸಲ್ ನಾಯಕ ವಿಕ್ರಂಗೌಡನ ಮೃತದೇಹದ ಅಂತ್ಯಸಂಸ್ಕಾರ ಹುಟ್ಟೂರಿನಲ್ಲಿ ಇಂದು ನೆರವೇರಿದೆ.
ಹೆಬ್ರಿಯ ಕೂಡ್ಲು ಗ್ರಾಮದ ಮನೆ ಆವರಣದಲ್ಲಿ ವಿಕ್ರಂಗೌಡನ ಅಂತ್ಯಸಂಸ್ಕಾರ ನೆರವೇರಿದ್ದು, ಚಿತೆಗೆ ತಮ್ಮ ಸುರೇಶ್ ಗೌಡ ಅಗ್ನಿ ಸ್ಪರ್ಶ ಮಾಡಿದರು.
ಈ ವೇಳೆ ಗ್ರಾಮದ ಜನರು, ಪೊಲೀಸರು ಹಾಜರಿದ್ದರು.
ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹದಳ(ANF) ನಡೆಸಿದ ಎನ್ಕೌಂಟರ್ ನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಸಾವನ್ನಪ್ಪಿದ್ದರು.